ಮಸಣ ನಿರ್ವಾಹಕರನ್ನು ನೇಮಿಸಲು ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಒತ್ತಾಯ

310122 Hospete Masana Workers Appeal
ಹೊಸಪೇಟೆ ತಹಸಿಲ್ ಕಚೇರಿಯ ಶಿರಸ್ತೇದಾರ್ ಆರ್.ಶ್ರೀಧರ್‌ಗೆ ಸೋಮವಾರ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ಪದಾಧಿಕಾರಿಗಳು.
Published on

ಹೊಸಪೇಟೆ: ಪ್ರತಿ ಸಾರ್ವಜನಿಕ ಸ್ಮಶಾನಗಳಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಮಸಣ ನಿರ್ವಾಹಕರನ್ನು ನೇಮಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಸಂಘದ ಪದಾಧಿಕಾರಿಗಳು ತಹಸಿಲ್ ಕಚೇರಿ ಶಿರಸ್ತೇದಾರ್ ಆರ್.ಶ್ರೀಧರ್‌ಗೆ ಸೋಮವಾರ ಮನವಿ ಸಲ್ಲಿಸಿದರು. ಮಸಣ ಕಾರ್ಮಿಕರಿಗೆ ಅಗತ್ಯ ಸೌಕರ್ಯ ಹಾಗೂ ಸಲಕರಣೆಗಳನ್ನು ಒದಗಿಸಬೇಕು. ಭವಿಷ ನಿಧಿ ಯೋಜನೆಯಡಿ ವಿಮೆ ಸೌಲಭ್ಯ ಕಲ್ಪಿಸಬೇಕು. ಪ್ರತಿ ಮಸಣ ಕಾರ್ಮಿಕರಿಗೆ ತಲಾ ಐದು ಎಕರೆ ಭೂಮಿ ಮಂಜೂರು ಮಾಡಬೇಕು ಎಂಬುದೂ ಸೇರಿ ವಿವಿಧ ಬೇಡಿಕೆ ಈಡೇರಿಸಲು ಮನವಿಯಲ್ಲಿ ಒತ್ತಾಯಿಸಲಾಗಿದೆ.

ದಲಿತ ಹಕ್ಕುಗಳ ಸಮಿತಿ ಸಂಚಾಲಕ ಎಂ.ಜಂಬಯ್ಯನಾಯಕ, ತಾಲೂಕು ಸಂಚಾಲಕ ವಿ.ಸ್ವಾಮಿ, ಕಲ್ಯಾಣಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net