ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ನೀಡಲಾರೆ; ಹೊಸಪೇಟೆಯಲ್ಲಿ ಸಚಿವ ಆನಂದ ಸಿಂಗ್ ಹೇಳಿಕೆ

09082021 Anandsing
Published on

ಹೊಸಪೇಟೆ: ನೀಡಿರುವ ಖಾತೆ ಕುರಿತಾಗಿ ಅತೃಪ್ತಿ ಹೊರಹಾಕಿದ್ದೇನೆ. ಆದರೆ, ಮುಖ್ಯಮಂತ್ರಿ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಪದೇಪದೆ ಮಾಧ್ಯಮಗಳ ಎದುರು ಬಂದು ಹೇಳಿಕೆ ನೀಡಲಾರೆ ಎಂದು ಸಚಿವ ಆನಂದ ಸಿಂಗ್ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಭೇಟಿಯಾಗಿ ಏನು ಹೇಳಬೇಕಿತ್ತೋ ಅದನ್ನು ಹೇಳಿದ್ದೇನೆ. ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ. ಎರಡ್ಮೂರು ದಿನ ಕಾದು ನೋಡುವೆ. ಅವರ ತೀರ್ಮಾನಕ್ಕೆ ಬದ್ಧನಿದ್ದೇನೆ. ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರುವುದಕ್ಕೂ ಮತ್ತು ರಾಜಕೀಯಕ್ಕೂ ಸಂಬಂಧವಿಲ್ಲ. ಈ ಪೂಜೆ ಪೂರ್ವನಿಯೋತಜಿತ. ದೇವಸ್ಥಾನ ಜೀರ್ಣೋದ್ಧಾರ ಮಾಡಬೇಕೆಂಬುದು ನನ್ನ ತಂದೆ ಆಸೆಯಾಗಿತ್ತು. ಇದರ ಅಭಿವೃದ್ಧಿಕಾರ್ಯ ನಡೆಯುತ್ತಿರುವಾಗಲೇ ಅವರು ನಿಧನರಾದರು. ಅವರು ಆಸೆಯಂತೆ ದೇವಸ್ಥಾನ ಜೀರ್ಣೋದ್ಧಾರ ಮಾಡಲಾಗಿದೆ. ಮೂರು ದಿನಗಳ ಕಾಲ ಪೂಜಾ-ಕೈಂಕರ್ಯ ನಡೆಯಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net