ನಿಗಮದಿಂದ ಅರ್ಜಿ ಅಹ್ವಾನ

Published on

ಹೊಸಪೇಟೆ : ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಈ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. https://kmdconline.karnataka.gov.in ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಠಡಿ ಸಂ:06. ಮೊದಲನೇ ಮಹಡಿ, ತಾಲೂಕು ಕಚೇರಿ, ಹೊಸಪೇಟೆ-583201, ವಿಜಯನಗರ ಜಿಲ್ಲೆ. ಅಥವಾ ದೂ.ಸಂ:08392-294370 ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net