ಸಮಸ್ಯೆಗಳ ಪರಿಹಾರ ಮಾಡುವ ಪ್ರಯತ್ನ

news
ಹೊಸಪೇಟೆ ತಾಲೂಕಿನ ಮಲಪನಗುಡಿಯಲ್ಲಿ ಸೋಮವಾರ ಜನ ಸಂಪರ್ಕ ಸಭೆ ನಿಮಿತ್ತ ಶಾಸಕ ಎಚ್.ಆರ್.ಗವಿಯಪ್ಪ ಜನರ ಸಮಸ್ಯೆ ಆಲಿಸಿದರು.
Published on

ಹೊಸಪೇಟೆL ಸಮಸ್ಯೆಗಳನ್ನು ಅರಿತು ಪರಿಹಾರ ಕಂಡು ಕೊಳ್ಳುವ ಪ್ರಯತ್ನ ಮಾಡುವುದಕ್ಕಾಗಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ತಾಲೂಕಿನ ಮಲಪನಗುಡಿಯಲ್ಲಿ ಸೋಮವಾರ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿ, ಈ ಭಾಗದ ಜನರ ಕಷ್ಟ ಸುಖಗಳನ್ನು ತಿಳಿದು ಕೊಳ್ಳಲು ಮತ್ತು ಮೂಲಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಯಾವ ಹೆಜ್ಜೆ ಇಡಬೇಕು ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ ಎಂದರು.

ಕ್ಷೇತ್ರದಲ್ಲಿನ ಕುಡಿವ ನೀರು, ರಸ್ತೆ ಸೌಕರ್ಯ ಸೇರಿದಂತೆ ಹತ್ತು ಹಲವು ಉದ್ದೇಶಗಳನ್ನು ಒಳಗೊಂಡ ಯೋಜನೆಗಳನ್ನು ತಯಾರಿಸಿದ್ದು, ಹಂತ ಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು. ಈ ನಿಟ್ಟಿ ಮತ್ತಷ್ಟು ಸೌಲಭ್ಯವಂಚಿತ ಗ್ರಾಮಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಮಲಪನಗುಡಿ ಗ್ರಾ.ಪಂ. ವ್ಯಾಪ್ತಿಯ ಕಡ್ಡಿರಾಂಪುರ ತಾಂಡ, ಗಾಳಮ್ಮನಗುಡಿ, ಹೊಸ ಮಲಪನಗುಡಿ ಗ್ರಾಮಗಳಿಗೂ ಭೇಟಿ ನೀಡಿದರು. ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಅವಶ್ಯಕತೆ ಇರುವ ಕಡೆ ಸಿಸಿ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಬAಧಿಸಿದAತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾ.ಪಂ. ಇಒ ಹರೀಶ್, ಗ್ರಾ.ಪಂ. ಅಧ್ಯಕ್ಷೆ ಚಂದ್ರಿಕಾ, ಉಪಾಧ್ಯಕ್ಷ ದೊರೆರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net