ಮಾದರಿ ಕ್ಷೇತ್ರವನ್ನಾಗಿ ಮಾಡುವೆ

news
ಹೊಸಪೇಟೆ ತಾಲೂಕಿನ ನಾಗೇನಹಳ್ಳಿಯಲ್ಲಿ ಶನಿವಾರ ಅಂಗನವಾಡಿಗೆ ಶಾಸಕ ಎಚ್.ಆರ್.ಗವಿಯಪ್ಪ ಭೇಟಿ ನೀಡಿ ಮಕ್ಕಳಿಗೆ ವಿಚಾರಿಸಿದರು.
Published on

ಹೊಸಪೇಟೆ: ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ತಾಲೂಕಿನ ನಾಗೇನಹಳ್ಳಿಯಲ್ಲಿ ಶನಿವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ಅಧಿಕಾರಿಗಳು ಸಬೂಬು ಹೇಳಬಾರದು. ಸರ್ಕಾರಿ ಕಚೇರಿಗಳಿಗೆ ಜನ ಅಲೆಯುವಂತೆ ಮಾಡಬಾರದು ಎಂದು ಸೂಚನೆ ನೀಡಿದರು.

ಜನ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನನ್ನ ಗಮನಕ್ಕೆ ತರಬೇಕು. ಅವುಗಳ ಪರಿಹಾರಕ್ಕೆ ತ್ವರಿತ ಕ್ರಮ ವಹಿಸಲಾಗುವುದು. ನನ್ನ ಮೇಲೆ ವಿಶ್ವಾಸವಿಟ್ಟು ನೀವೆಲ್ಲಾ ಗೆಲ್ಲಿಸಿದ್ದೀರಿ. ಅದಕ್ಕೆ ನಾನು ಕೃತಜ್ಞನಾಗಿದ್ದೇನೆ. 5 ವರ್ಷಗಳ ಅವಧಿಯಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರವನ್ನು ಮಾದರಿಯಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಅದಕ್ಕೂ ಮುನ್ನ ಗ್ರಾಮದಲ್ಲಿ ಸಂಚರಿಸಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಅಗತ್ಯವಿರುವ ಕಡೆ ಚರಂಡಿ ಮತ್ತು ಸಿಸಿ ರಸ್ತೆಗಳ ನಿರ್ಮಾಣಕ್ಕೆ ಆದೇಶಿಸಿದರು. ಕುಡಿಯುವ ನೀರಿನ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಗಳನ್ನು ಉದ್ಘಾಟಿಸಿದರು. ಹಾಗೂ ಅಂಗನವಾಡಿ ಭೇಟಿ ನೀಡಿ ಮಕ್ಕಳಿಗೆ ಮಿಲ್ಲೆಟ್ ಲಡ್ಡು (ಸಿರಿಧಾನ್ಯ ಉಂಡೆ)ಗಳನ್ನು ತಿನಿಸಿದರು. ಶಾಸಕ ಎಚ್.ಆರ್.ಗವಿಯಪ್ಪ ಅವರಿಗೆ ಗ್ರಾಮಸ್ಥರಿಂದ ಕಳಸ, ಡೊಳ್ಳು, ತಮಟೆಗಳಿಂದ ಅದ್ದೂರಿ ಸ್ವಾಗತ ನೀಡಿದರು.

ಗ್ರಾ.ಪಂ ಅಧ್ಯಕ್ಷ ಎಂ.ದುರ್ಗಪ್ಪ, ಉಪಾಧ್ಯಕ್ಷೆ ಟಿ.ಸವಿತಾ, ತಾ.ಪಂ. ಇಒ ಹರೀಶ್, ಪ್ರಮುಖರಾದ ಚಂದ್ರಶೇಖರ್, ಅಲ್ಲಾಭಕ್ಷ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net