

ಹೊಸಪೇಟೆ: ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಹವಾಲುಗಳನ್ನು ನೀಡುತ್ತಿದ್ದು ಹಂತಹAತವಾಗಿ ಅವುಗಳನ್ನು ಬಗೆ ಹರಿಸಲು ಕ್ರಮ ವಹಿಸುತ್ತಿದ್ದೇನೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ಇಲ್ಲಿನ ಎಂ.ಜೆ.ನಗರದಲ್ಲಿ 22 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ ಕುಡಿಯುವ ನೀರಿನ ಸಮಸ್ಯೆ ಸಾರಿಗೆ ವಿದ್ಯುತ್ ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಡಲು ನಿರಂತರ ಶ್ರಮಿಸುವೆ. ತಮ್ಮ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ. ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಗುತ್ತಿಗೆದಾರರಿಗೆ ಸೂಚಿಸಿದರು.
ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್ ಗುಪ್ತ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್, ನಗರಸಭೆ ಸದಸ್ಯರಾದ ತಾರಿಹಳ್ಳಿ ಜಂಬುನಾಥ, ಮಂಜುನಾಥ, ಪ್ರಮುಖರಾದ ಗೋವಿಂದಪ್ಪ, ಮೃತ್ಯಂಜಯ ಗೌಡ, ಮರಡಿ ಮಂಜುನಾಥ, ಕೋತಿ ಕೊಟ್ರೇಶ್ ಇತರರಿದ್ದರು.