ಶಾಸಕರ ಅಮಾನತು ಆದೇಶ ಹಿಂಪಡೆಯಲಿ

24 MANJU 02
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0071,0.0000; brp_del_sen:0.1300,0.0000; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 71.10602;aec_lux_index: 0;albedo: ;confidence: ;motionLevel: -1;weatherinfo: null;temperature: 38;
Published on

ಹೊಸಪೇಟೆ: ಬಿಜೆಪಿ ಶಾಸಕರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿದ ಆದೇಶವನ್ನು ಹಿಂಪಡೆಯುವAತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ತಹಸೀಲ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಶೃತಿ ಮಳ್ಳಪ್ಪ ಗೌಡ್ರಗೆ ಮನವಿ ಸಲ್ಲಿಸಿದರು.

ಹನಿಟ್ರ‍್ಯಾಪ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರನ್ನು, ಅಮಾನತು ಮಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ನಿರ್ಧಾರ ಕಾನೂನುಬಾಹಿರವಾಗಿದೆ. ಸಂವಿಧಾನಬಾಹಿರ, ಏಕಪಕ್ಷೀಯ ನಿರ್ಧಾರವಾಗಿದೆ. ಸ್ಪೀಕರ್ ಶಾಸಕರನ್ನು ಮಾತ್ರವಲ್ಲದೆ ಅವರ ಕ್ಷೇತ್ರದ ಜನರನ್ನು ಸಹ ಅವಮಾನಿಸಿದ್ದಾರೆ. ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು .

ರಾಜ್ಯದ ಬಜೆಟ್ ಅಲ್ಪಸಂಖ್ಯಾತರಿಗೆ ಮಾತ್ರ ಅನಕೂಲವಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಅಹಿಂದ, ಸಂವಿಧಾನ ಎಂದು ಪಠಿಸುವ ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟರ ಪರ ಕಾಳಜಿ ಇಲ್ಲ. ಅವರ ಆಡಳಿತದಲ್ಲೇ ಪರಿಶಿಷ್ಟರ ಅನುದಾನ ದುರ್ಬಳಕೆ ಆಗಿದೆ. ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ 25 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಪರಿಶಿಷ್ಟರನ್ನು ವಂಚಿಸಿದೆ. ಕಾಂಗ್ರೆಸ್ ಪರಿಶಿಷ್ಟರ ಹಾಗೂ ಹಿಂದುಳಿದ ವರ್ಗಗಳ ಏಳಿಗೆ ಸಹಿಸುತ್ತಿಲ್ಲ ಎಂಬುದನ್ನು ಬಿಂಬಿಸುವ ಘೋಷವಾಕ್ಯಗಳಿದ್ದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಶಿವಯೋಗಿ ಸ್ವಾಮಿ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಕಿಚಡಿ ಕೊಟ್ರೇಶ, ಪ್ರಮುಖರಾದ ಅಶೋಕ್ ಜಿರೆ, ಭರಮಲಿಂಗನಗೌಡ, ಕೆ ಎಸ್ ರಾಘವೇಂದ್ರ, ಶಂಕರ್ ಮೇಟಿ, ಉಮಾಪತಿ ಅರುಂಡಿ ಸುವರ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net