ಕಟ್ಟಡ ತ್ವರಿತವಾಗಿ ಪೂರ್ಣಗೋಳಿಸಿ

16 MANJU 02
Published on

ಹೊಸಪೇಟೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ನೂತನ ಕಟ್ಟಡ ನಿರ್ಮಾಣ ಸ್ಥಗಿತವಾಗಿದ್ದು ಇದನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೆಆರ್‌ಡಿಎಲ್ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದರು.

ನಗರದ ಪಟೇಲ್ ನಗರದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡ ಕಾಮಗಾರಿ ಶನಿವಾರ ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಉಪವಿಭಾಗ ಆರಂಭವಾದಾಗಿನಿಂದ ಕಾರ್ಯನಿರ್ವಹಿಸುತ್ತಿದೆ. ಹಂಪಿ ವಿಶ್ವ ಪಾರಂಪಾರಿಕತಾಣವಾಗಿರುವುದರಿAದ ವಾರ್ತಾ ಇಲಾಖೆ ಅನಿವಾರ್ಯವಾಗಿದ್ದು ಕಚೇರಿ ಮುಚ್ಚಬೇಕೆಂಬ ಆದೇಶವಾದರೂ ಇಲ್ಲಿನ ಪತ್ರಕರ್ತರ ಸತತ ಪ್ರಯತ್ನದ ಫಲವಾಗಿ ಉಪವಿಭಾಗ ಕಚೇರಿ ಉಳಿಯುವಂತಾಯಿತು ಎಂದು ಪತ್ರಕರ್ತರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಜಯನಗರ ಜಿಲ್ಲೆಯಾಗಿದ್ದು ಎಲ್ಲಾ ಜಿಲ್ಲಾ ಮಟ್ಟದ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲು ಸ್ವಂತ ಕಟ್ಟಡ ಅನಿವಾರ್ಯವಾಗಿದೆ. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಅಂದಾಜು ಕಟ್ಟಡ 71 ಲಕ್ಷ ರೂ. ವೆಚ್ಚದಲ್ಲಿ ಕಳೆದ ಎರಡು ವರ್ಷಗಳಿಂದ ನಿರ್ಮಾಣವಾಗುತ್ತಿದೆ. ಕಟ್ಟಡ ನಿರ್ಮಾಣ ಅಂತಿಮ ಹಂತಕ್ಕೆ ಬಂದು ಸ್ಥಗಿತ ಮಾಡಲಾಗಿದೆ. ಮುಂದಿನ ಹದಿನೈದು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕಚೇರಿ ಇಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡಲು ಕೆಆರ್‌ಡಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net