ಸರ್ಕಾರ ಯೋಜನೆಗಳು ಸಾರ್ವಜನಿಕರು ಅರಿಯಲಿ

27 MANJU 13
Published on

ಹೊಸಪೇಟೆ: ಸರ್ಕಾರದ ಎರಡು ವರ್ಷದ ಸಾಧನೆಗಳ ಸಮಾವೇಶವನ್ನು ನಗರದಲ್ಲಿ ಆಯೋಜಿಸಿ ಯಶಸ್ವಿಗೊಳಿಸಿರುವುದು ತೃಪ್ತಿ ನೀಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೇಂದ್ರ ಬಸ್‌ನಿಲ್ದಾಣದಲ್ಲಿ ಶುಕ್ರವಾರ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು

ರಾಜ್ಯ ಸರ್ಕಾರವು ಜಾರಿ ಮಾಡಿದ ಅನ್ನಭಾಗ್ಯ ಯೋಜನೆಯಿಂದ ಕಡು ಬಡವರು, ಕೃಷಿ ಕೂಲಿಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಗೃಹಲಕ್ಷಿö್ಮÃ ಯೋಜನೆ ಜಾರಿಯಿಂದಾಗಿ ಮಹಿಳೆಯರಿಗೆ ಪ್ರತಿ ತಿಂಗಳ ಎರಡು ಸಿಗುತ್ತಿದೆ. ಗೃಹ ಜ್ಯೋತಿ ಯೋಜನೆಯಿಂದ ಅರ್ಹ ಫಲಾನುಭವಿಗಳಿಗೆ ಮತ್ತು ಯುವನಿಧಿ ಯೋಜನೆಯಿಂದ ನಿರುದ್ಯೋಗಿ ಯುವಕರಿಗೆ ಸಾಕಷ್ಟು ಅನುಕೂಲವಾಗಿದೆ. ಶಕ್ತಿ ಯೋಜನೆ ಜಾರಿಯಿಂದಾಗಿ ಜಿಲ್ಲೆಯ ಸಾರಿಗೆ ಸಂಸ್ಥೆಗೆ ಪ್ರತಿ ತಿಂಗಳ ಕೋಟಿಗಟ್ಟಲೇ ಆದಾಯ ಬರುತ್ತಿದೆ. ಸಂಸ್ಥೆಯು ಮೊದಲಿಗಿಂತ ಹೆಚ್ಚಿನ ರೀತಿಯಲ್ಲಿ ಬಲವರ್ಧನೆಯಾಗಿದೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಧನಂಜಯಪ್ಪ ಮಾತನಾಡಿ, ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣಗಳಲ್ಲಿ ವಸ್ತು ಪ್ರದರ್ಶನ ಮಳಿಗೆಯನ್ನು ಹಾಕಲಾಗಿದೆ ಎಂದರು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ್ ನಿಯಾಜಿ, ವಾರ್ತಾ ಇಲಾಖೆಯ ಸ್ಥಾನಿಕಾಧಿಕಾರಿ ಕೆ.ರಾಮಾಂಜನೇಯ, ಕೆಎಸ್‌ಆರ್‌ಟಿಸಿ ಡಿಟಿಒ ರಾಜಶೇಖರ್ ವಾಜಂತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net