ಅರ್ಥ ಪೂರ್ಣ ಓಬವ್ವ ಜಯಂತಿ ಆಚರಿಸಿ

news
ಹೊಸಪೇಟೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಒನಕೆ ಓಬವ್ವ ಜಯಂತಿ ಪೂರ್ವ ಭಾವಿ ಸಭೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
Published on

ಹೊಸಪೇಟೆ: ವೀರವನಿತೆ ಒನಕೆ ಓಬವ್ವ ಅವರ ಜಯಂತಿ ನ.11 ರಂದು ಅರ್ಥ ಪೂರ್ಣವಾಗಿ ಆಚರಣೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಓಬವ್ವ ದಿಟ್ಟ ಮಹಿಳೆ, ಅವರನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡಬಾರದು. ಅವರ ಗುಣಗಳನ್ನು ಮಕ್ಕಳಲ್ಲಿ ತುಂಬುವಲ್ಲಿ ಜಯಂತಿ ಆಚರಣೆ ದಾರಿಯಾಗಬೇಕು ಎಂದರು.

ನ.11 ರಂದು ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಇಲಾಖೆಯಿಂದ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಜಯಂತಿಯ ಆಮಂತ್ರಣ ಪತ್ರಿಕೆ ಮುದ್ರಿಸಿ, ಆಮಂತ್ರಣ ಪತ್ರಿಕೆಗಳನ್ನು ಗಣ್ಯ ಮಾನ್ಯರಿಗೆ ವಿತರಿಸಬೇಕು ಎಂದರು.

ವೇದಿಕೆ ಕಾರ್ಯಕ್ರಮದ ನಂತರ ಕಲಾ ತಂಡಗಳನ್ನು ಒಳಗೊಂಡ ಮೆರವಣಿಗೆ ನಗರದ ಚಲವಾದಿ ಓಣಿಯಿಂದ ರಾಮ ಟಾಕೀಸ್, ಉದ್ಯೋಗ್ ಪೆಟ್ರೋಲ್ ಬಂಕ್, ನಗರಸಭೆ ಕಚೇರಿ, ಟೌನ್ ಪೊಲೀಸ್ ಠಾಣೆ ಪುನೀತ್ ಸರ್ಕಲ್ ಮತ್ತು ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆ ಸಾಗುವುದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ಕೆ.ರಂಗಣ್ಣನವರ, ನಗರಸಭೆಯ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ಆರೋಗ್ಯ ಶಿಕ್ಷಕಣಾಧಿಕಾರಿ ಡಾ.ಎಂ.ಪಿ.ದೊಡ್ಡಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net