ವಾಲ್ಮೀಕಿ ಜಯಂತಿ ಅ.07ಕ್ಕೆ

Published on

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅ.07 ರಂದು ಬೆ.10 ಕ್ಕೆ ಶ್ರೀಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಡಗ ಮತ್ತು ಬಾಲ ಯೋಜನೆಯಡಿ 1 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net