ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಜಾಗೃತಿಯಾಗಲಿ

19 MANJU 03
Published on

ಹೊಸಪೇಟೆ: ಆರ್.ಟಿ.ಇ ಮಕ್ಕಳ ಶಿಕ್ಷಣ ಹಕ್ಕಾಗಿದ್ದು ಇದರ ಜತೆಗೆ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಆರ್.ಟಿ.ಇ ಅನುಷ್ಟಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಮಾಲೋಚಣಾ ಸಭೆಯಲ್ಲಿ ಮಾತನಾಡಿದರು.

ಶಾಲೆಯಿಂದ ಹೊರ ಉಳಿದ 3200 ಮಕ್ಕಳನ್ನು ಪುನಃ ಶಾಲೆಗೆ ಕರೆತರುವಲ್ಲಿ ಶಿಕ್ಷಣ ಇಲಾಖೆಯ ಶ್ರಮವಹಿಸಬೇಕಿದೆ. ಇದರಿಂದ ಮಕ್ಕಳಿಗೆ ಶೈಕ್ಷಣಿಕ, ಸಾಮಾಜಿಕವಾಗಿ ಬೆಳವಣಿಗೆಗೆ ಸಹಕಾರಿಯಾಗಬೇಕು. ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ, ಕುಡಿವ ನೀರಿನ ವ್ಯವಸ್ಥೆ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಅಭಿವೃದ್ದಿಪಡಿಸಬೇಕು ಎಂದರು.

ಸ್ಯಾಟ್ಸ್ ನಿಂದ ಕೇಂದ್ರ ಸರ್ಕಾರದ ಅಪಾರ ತಂತ್ರಾAಶದಲ್ಲಿ ಬಾಕಿ ಉಳಿದಿರುವ ಮಕ್ಕಳ ದಾಖಲಾತಿಯನ್ನು ಒಂದು ತಿಂಗಳೊಳಗಾಗಿ ದಾಖಲಿಸಬೇಕು. ಜಿಲ್ಲೆಯಲ್ಲಿ 88 ಬಾಲ್ಯವಿವಾಹ ನಡೆದಿದ್ದು, 67 ಪ್ರಕರಣ ದಾಖಲಿಸಲಾಗಿದೆ. ಉಳಿದ 21 ಪ್ರಕರಣಗಳು ಯಾವ ಕಾರಣಕ್ಕಾಗಿ ದಾಖಲಿಸಿಲ್ಲ, ಇದಕ್ಕೆ ಸಂಬAಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ದಾಖಲಿಸಬೇಕು. ವಿಫಲರಾದ ಅಧಿಕಾರಿಗಳ ಮೇಲೆ ಬಾಲ್ಯವಿವಾಹ ನಿಷೇಧ ಕಾಯ್ದೆ ಪ್ರಕಾರ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net