ಮಾಹನೀಯರ ಜಯಂತಿ ಅಚ್ಚುಕಟ್ಟಾಗಿ ನಡೆಯಲಿ

01 MANJU 01
Published on

ಹೊಸಪೇಟೆ: ನಗರ ಸೇರಿದಂತೆ ಜಿಲ್ಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿ ಅವರ ಜಯಂತ್ಯುತ್ಸವ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಅಪರ ಜಿಲ್ಲಾಧಿಕಾರ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತ ಸಭೆಯಲ್ಲಿ ಮಾತನಾಡಿದರು.

ಅ.2ರಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿಯವರ ಭಾವಚಿತ್ರಕ್ಕೆ ಪೂಜೆ, ಪ್ರತಿಜ್ಞಾ ವಿಧಿ ಸ್ವೀಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ಆಯಾ ಇಲಾಖೆಗಳಲ್ಲಿ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತಿçÃಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದರು.

ಗಾAಧೀಜಿಯವರು ಶ್ರಮದಾನಕ್ಕೆ ವಿಶೇಷ ಒತ್ತು ನೀಡಿದ್ದರು. ಹೀಗಾಗಿ ಸಾರ್ವಜನಿಕರಿಗೆ ಉತ್ತಮ ಸಂದೇಶ ಹೋಗುವ ನಿಟ್ಟಿನಲ್ಲಿ ಜಯಂತ್ಯುತ್ಸವದ ಅಂಗವಾಗಿ ಬೆಳಗ್ಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮದಡಿ ನಡೆಯುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ತಪ್ಪದೇ ಭಾಗಿಯಾಗಬೇಕು ಎಂದು ಸೂಚನೆ ನೀಡಿದರು.

ಅ.10ರಂದು ನಡೆಯುವ ಗಾಂಧೀಜಿ ಜಯಂತ್ಯುತ್ಸವದ ವಿಶೇಷ ಕಾರ್ಯಕ್ರಮದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಗಾಂಧೀ ಭಜನೆ, ಸರ್ವಧರ್ಮ ಪ್ರಾರ್ಥನೆ, ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಸಭೆಯಲ್ಲಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net