ಹೊಸಪೇಟೆ : ಜಿಲ್ಲೆಯ ಅಂಗಲವಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ನ.27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ.23 ರಿಂದ ನ.26 ರವರೆಗೆ ಹೆಸರನ್ನು ನೊಂದಾಯಿಸಲು ತಾಲೂಕಿನ ವಿವಿದೋದ್ದೇಶ ಪುರ್ನವಸತಿ ಕಾರ್ಯಕರ್ತರ ಹತ್ತಿರ ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.