

ಹೊಸಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಮೂರುದಿನಗಳಿಂದ ಇಲ್ಲಿನ ನಗರಸಭೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಪದಾಧಿಕಾರಿಗಳಿಗೆ ಶಾಸಕ ಎಚ್.ಆರ್.ಗವಿಯಪ್ಪ ಭರ್ಜರಿ ಬಾಡೂಟ ಉಣ ಬಡಿಸಿದರು.
ಕಳೆದ ಮೂರು ದಿನಗಳಿಂದ ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಕರ್ತವ್ಯಕ್ಕೆ ಗೈರಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಶಾಸಕ ಬೆಂಬಲ ಸೂಚಿಸಿದ್ದಾರೆ. 50 ಕೆಜಿ ಚಿಕನ್, 50 ಕೆ.ಜಿ ರೈಸ್‌ನಲ್ಲಿ ಬಿರ್ಯಾನಿ ತಯಾರಿಸಿ ಊಟದ ವ್ಯವಸ್ಥೆ ಮಾಡಿಸಿದರು.
ಈಲ್ಲೆಯ ನಗರ, ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸುವುದು. ರಾಜ್ಯ ಸರ್ಕಾರಿ ನೌಕರರಿಗೆ ದೊರಕುತ್ತಿರುವ ಸೌಲಭ್ಯಗಳಾದ ಕೆಜೆಐಡಿ, ಜಿಪಿಎಫ್ ಇತರ ಸವತ್ತುಗಳನ್ನು ನೀಡಬೇಕು. ವಿವಿಧ ವೃಂದಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಗುತ್ತಿಗೆ ಪದ್ದತಿಯಿಂದ ಮುಕ್ತಗೊಳಿಸಿ ನೇರ ನಗರ ಸ್ಥಳೀಯ ಸಂಸ್ಥೆಗಳಿAದ ನೇರ ಪಾವತಿಯಡಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.