

ಹೊಸಪೇಟೆ: ಜಿಲ್ಲೆಯ ವಿವಿಧ ಕಡೆ ಶನಿವಾರ ಪಾವಗಡ ಬಹುಗ್ರಾಮ ಕುಡಿವ ನೀರಿನ ಯೋಜನೆಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದರು.
ತುಂಗಭದ್ರಾ ಜಲಾಶಯದ ಹಿನ್ನೀರಿನ ಭಾಗದಲ್ಲಿ ಜಾಕ್‌ವೆಲ್ ಹಾಗೂ ಕೂಡ್ಲಿಗಿ ತಾಲೂಕಿನ ಶಿವಪುರದ ಬಳಿ ನಡೆಯುತ್ತಿರುವ ಕಾಮಗಾರಿ ಸೇರಿದಂತೆ ನಿರ್ಮಾಣದ ವಿವಿಧ ಹಂತಗಳಲ್ಲಿರುವ ವಿವಿಧ ಘಟಕಗಳ ಕಾಮಗಾರಿಗಳನ್ನು ಪರಿಶೀಲಿಸಿದರು. ಸಂಬಂಧಿಸಿದ ಅಧಿಕಾರಿಗಳಿಗೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಗುಣಮಟ್ಟದೊಂದೊಗೆ ಪೂರ್ಣಗೊಳಿಸಲು ಸೂಚಿಸಿದರು.
ವಿಜಯನಗರ ಜಿಪಂ ಸಿಇಒ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಚಿತ್ರದುರ್ಗ ಜಿಪಂ ಸಿಇಒ ಎಡ್.ಜೆ.ಸೋಮಶೇಖರ್, ಇಲಾಖೆಯ ಇಇ ಎಸ್.ದೀಪಾ, ಎಇ ಶ್ರೀರಂಗ ಇತರರಿದ್ದರು.