ಹೊಸಪೇಟೆ: ನಗರದ ಹಾಗೂ ಜಿಲ್ಲೆಯಲ್ಲಿ ನ.16 ಮತ್ತು 17 ರಂದು ನಡೆಯುವ ಪಿಡಿಒ ಹುದ್ದೆಗಳ ನೇಮಕಾತಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 200 ಮೀಟರ್ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಆದೇಶಿಸಿ, ಎಲ್ಲಾ ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ಪರೀಕ್ಷಾರ್ಥಿಗಳಲ್ಲದ, ಪರೀಕ್ಷಾ ಉಸ್ತುವಾರಿ ಇಲ್ಲದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಅಥವಾ ಯಾವುದೇ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ಕಡ್ಡಾಯವಾಗಿ ನಿಷೇಧಿಸಿದೆ.