ಕನ್ನಡ ಸಂಸ್ಕೃತಿ ಉಳಿಸಲು ಪ್ರಯತ್ನಶೀಲರಾಗಿ

news
ಹೊಸಪೇಟೆ ತಾಲೂಕಿನ ಕಮಲಾಪುರದ ಪಾಂಡುರAಗ ದೇಗುಲದಲ್ಲಿ ಶನಿವಾರ ರಾಜ್ಯ ಮಟ್ಟದ ಕವಿ ಕಲಾವಿದರ ಸಮ್ಮೇಳನ ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಉದ್ಘಾಟಿಸಿದರು.
Published on

ಹೊಸಪೇಟೆ: ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಹೇಳಿದರು.

ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ, ನೆಲಮಂಗಲದ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನಿಂದ ತಾಲೂಕಿನ ಕಮಲಾಪುರದ ಪಾಂಡುರAಗ ದೇಗುಲದಲ್ಲಿ ಶನಿವಾರ ರಾಜ್ಯ ಮಟ್ಟದ ಕವಿ ಕಲಾವಿದರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಮುಂದಿನ ಪೀಳಿಗೆಗೆ ಕನ್ನಡ ಸಂಸ್ಕೃತಿಯನ್ನು ಮುಂದುವರಿಸುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಶೀಲರಾಗಬೇಕು ಎಂದರು.

ಈ ಸಂದರ್ಭದಲ್ಲಿ ಹಂಪಿಯಲ್ಲಿ ಕಲ್ಲಿನ ರಥ ನಮ್ಮದು ಕನ್ನಡ ಪಥ, ಚಿಗುರು ಕವನ ಸಂಕಲನ ಮತ್ತು ಸಾಧನೆಗೆ ಸಾಲು ಸಾಲು ಮೆಟ್ಟಿಲುಗಳು ಎನ್ನುವ ಮೂರು ಕೃತಿಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಮಕ್ಕಳ ಗೋಷ್ಠಿ, ಯುವ ಘೋಷ್ಠಿ, ಮಹಿಳಾ ಗೋಷ್ಠಿ, ವಿಚಾರ ಸಂಕಿರಣ ಹಾಗೂ ಕವಿ ಗೋಷ್ಠಿ ಹಾಗೂ ಭರತನಾಟ್ಯ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜ್ಞಾನಗಂಗಾ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದ ರಾಜ್ಯಾಧ್ಯಕ್ಷ ಮಣ್ಣೆ ಮೋಹನ್ ಕಾರ್ಯಮದ ಅಧ್ಯಕ್ಷತೆ ವಹಿಸಿದ್ದರು. ಚುಟುಕು ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಡಿ.ಡಿ.ಮುತಾಲಿಕ್ ದೇಸಾಯಿ, ಜಿಲ್ಲಾಧ್ಯಕ್ಷ ಎಲ್,ಹಾಲ್ಯಾನಾಯಕ್, ಪ್ರಮುಖರಾದ ಕೆ.ಎಂ.ರೇಖಾ ಪ್ರಕಾಶ್, ರಾಘವೇಂದ್ರ ಆಚಾರ್, ಚಂದ್ರಶೇಖರಯ್ಯ ರೋಣದ ಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net