ಪೊಲೀಸರಿಗೆ ದೈಹಿಕ, ಮಾನಸಿಕ ಸದೃಢತೆ ಅವಶ್ಯ

news
ಹೊಸಪೇಟೆಯ ಸಶಸ್ತ್ರ ಮೀಸಲು ಪಡೆ ಪರೇಡ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಚಾಲನೆ ನೀಡಿದರು.
Published on

ಹೊಸಪೇಟೆ: ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ನಗರದ ಸಶಸ್ತ್ರ ಮೀಸಲು ಪಡೆ ಪರೇಡ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರದ ಇತರೆ ಇಲಾಖೆಗಳಿಗೆ ಹೋಲಿಸಿದಲ್ಲಿ ಪೊಲೀಸ್ ಇಲಾಖೆಯವರು ಹೆಚ್ಚಿನ ಸಮಯ ಕರ್ತವ್ಯಕ್ಕೆ ಮೀಸಲಿಡಬೇಕಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹೆಚ್ಚಿನ ಒತ್ತಡಕ್ಕೆ ಒಳಗಾಗುವಂತಾಗಿದೆ. ಅತಿ ಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನದ 24 ಗಂಟೆ ಸಹ ಎಚ್ಚರಿಕೆ ವಹಿಸಬೇಕಾಗಿದೆ. ಇದರಿಂದಾಗಿ ಕುಟುಂಬದೊAದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಅದರೂ ಸಹ ಅಲ್ಪಸ್ವಲ್ಪ ಬಿಡುವಿನಲ್ಲಿ ಕುಟುಂಬದ ಸದಸ್ಯರ ಬಗ್ಗೆ ಕಾಳಜಿ ವಹಿಸುವ ಮೂಲಕ ಕುಟುಂಬದಲ್ಲೂ ನೆಮ್ಮದಿ ವಾತಾವರಣ ರೂಪಿಸಿಕೊಳ್ಳಬೇಕಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿಯಾಗಿದೆ. ಮೂರು ದಿನಗಳ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹ ಹಾಗೂ ಸಂತೋಷದಿAದ ಭಾಗವಹಿಸಿ ಎಂದರು.

ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಡಿವೈಎಸ್ಪಿಗಳಾದ ಮಂಜುನಾಥ, ಮಲ್ಲೇಶಪ್ಪ ಇತರರಿದ್ದರು. ಕಬ್ಬಡಿ, ವಾಲಿಬಾಲ್, ಓಟದ ಸ್ಪರ್ಧೆ, ಶಾಟ್ ಪುಟ್, ಕ್ರಿಕೇಟ್ ಸೇರಿದಂತೆ ಇತರೆ ಕ್ರೀಡೆಗಳಲ್ಲಿ ಪೊಲೀಸ್ ಕೀಡಾಪಟುಗಳು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net