ಪ್ರವೀಣ್ ಕಿತ್ನೂರಗೆ ರಾಜ್ಯಮಟ್ಟದ ಬಹುಮಾನ

04 MANJU 01
Published on

ಹೊಸಪೇಟೆ: ವಾರ್ತಾ ಇಲಾಖೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಯಲ್ಲಿ ಕನ್ನಡ ವಿವಿಯ ಸ್ನಾತಕೋತ್ತರ ವಿದ್ಯಾರ್ಥಿ ಪ್ರವೀಣ್ ನಿಂಗಪ್ಪ ಕಿತ್ನೂರ್ ಅವರು ಬರೆದ ಗಾಂಧೀಜಿಯವರ ಸ್ವರಾಜ್ ಮತ್ತು ಆರ್ಥಿಕ ಚಿಂತನೆಗಳು ಪ್ರಬಂಧವು ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ.

ಬೆಂಗಳೂರಿನ ವಾರ್ತಾಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿಜೇತ ಪ್ರವೀಣ್‌ಗೆ ನಗದು ಹಾಗೂ ಪುರಸ್ಕಾರ ನೀಡಿ ಗೌರವಿಸಿದರು.

ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net