ಅಂಕಿಅAಶ ಓದುವುದಕ್ಕಿಂತ ಸಮಸ್ಯೆ ಅರ್ಥೈಸಿ

31 MANJU 01
Published on

ಹೊಸಪೇಟೆ: ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳು ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಬೇಕಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಅನುಭವ ಇರುವುದರಿಂದ ವಿಜಯನಗರ ಜಿಲ್ಲೆಯ ಬಗ್ಗೆ ಪೂರ್ಣ ಮಾಹಿತಿ ಇದೆ. ಪ್ರಗತಿ ಪರಿಶೀಲನೆ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ದಾಖಲೆಯಲ್ಲಿರುವ ಅಂಕಿಅAಶಗಳನ್ನು ವಾಚನ ಮಾಡುವ ಬದಲು ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಮುಕ್ತವಾಗಿ ಸಭೆಯಲ್ಲಿ ಚರ್ಚಿಸಿ ಎಂದರು.

ಕುಡಿವ ನೀರು ಪೂರೈಕೆಯಲ್ಲಿ ವಿಳಂಬ ಆಗದಂತೆ, ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಆನಾರೋಗ್ಯ ಪೀಡಿತರಾಗದಂತೆ ವಾಂತಿ ಭೇದಿ ಪ್ರಕರಣಗಳು, ಮಕ್ಕಳಲ್ಲಿ ಚರ್ಮ ಸಂಬAಧಿತ ಸಮಸ್ಯೆಗಳು ಆಗದಂತೆ ನಿಗಾ ವಹಿಸಬೇಕು. ಹೆಚ್ಚು ನೈರ್ಮಲ್ಯತೆಗೆ, ಶುದ್ದ ಕುಡಿವ ನೀರು ಪೂರೈಕೆಗೆ ಕ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ನಿಗದಿತ ವೇಳೆಗೆ ಸಮವಸ್ತç ವಿತರಣೆ, ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ವಾರ್ಡನ್‌ಗಳ ನಿಯೋಜನೆಗೆ ಗಮನ ಹರಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಉಪವಿಭಾಗಿಯಾಧಿಕಾರಿಗಳಾದ ಪಿ.ವಿವೇಕಾನಂದ, ಚಿದಾನಂದ ಗುರುಸ್ವಾಮಿ, ಡಿಎಚ್‌ಒ ಡಾ.ಎಲ್.ಆರ್.ಶಂಕರನಾಯ್ಕ, ಕೃಷಿ ಇಲಾಖೆ ಉಪನಿದೇರ್ಶಕ ನಯೀಮ್ ಪಾಷಾ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net