ಕಚೇರಿಗಳಿಗೆ ಅಲೆದಾಡಿಸದೆ ಸ್ಪಂದಿಸಿ

news
ಹೊಸಪೇಟೆಯಲ್ಲಿ ಮಂಗಳವಾರ ನಡೆದ ಜನಸ್ಪಂಧನಾ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರ ಅರ್ಜಿ ಸ್ವೀಕರಿಸಿದ ಜಿಲ್ಲಾಧಿಕಾರಿ ಎಂಎಸ್.ದಿವಾಕರ್.
Published on

ಹೊಸಪೇಟೆ: ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ವಿನಾಕಾರಣ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಬೇಕುಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜನಸ್ಪಂಧನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಅಹವಾಲುಗಳಿಗೆ ಪರಿಹಾರ ದೊರೆತಾಗ ಮಾತ್ರ ಜನಸ್ಪಂದನ ಕಾರ್ಯಕ್ರಮ ಅರ್ಥ ಪೂರ್ಣವಾಗುತ್ತದೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕೃತ ಅಹವಾಲುಗಳ ಅರ್ಜಿಗಳನ್ನು ಆದಷ್ಟು ಬೇಗ ಬಗೆಹರಿಸಲಾಗುತ್ತದೆ. ಕಾನೂನು ತೊಡಕು ಇರುವ ಅರ್ಜಿಗಳನ್ನು ಹೊರತುಪಡಿಸಿ ಉಳಿದ ಅರ್ಜಿಗಳನ್ನು ಇತ್ಯಾರ್ಥ ಆಗುತ್ತವೆ. ಸರ್ಕಾರಿ ಸೇವೆಯಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಮಾತ್ರ ಜನರು ಸಮಸ್ಯೆಗಳಿಂದ ದೂರವಿರಲು ಸಾಧ್ಯ. ಸರ್ಕಾರ ಪ್ರತಿಯೊಂದು ಸರ್ಕಾರಿ ಕಚೇರಿಗಳಲ್ಲಿನ ವಿಷಯಗಳನ್ನು ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲು ಜನಸ್ಪಂದನ ಆಯೋಜಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದರು.

ಕAದಾಯ ಇಲಾಖೆ ಕೆಲಸಗಳು, ಜಿ.ಪಂ. ಕುಡಿವ ನೀರಿನ ಸಮಸ್ಯೆ, ಪಡಿತರ ಚೀಟಿ ಸಮಸ್ಯೆ, ಸಂಧ್ಯಾ ಸುರಕ್ಷೆ, ಇನ್ನಿತರ ನಾನಾ ಇಲಾಖೆ ಸಮಸ್ಯೆ ಬಗ್ಗೆ ಸಾರ್ವಜನಿಕರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಯಿತು.

ನಿಯಮಾನುಸಾರ ಲೇಔಟ್‌ಗಳಿಗೆ ಅನುಮತಿ ನೀಡಿ

ನಗರದ ಹೊರವಲಯದ ಹಂಪಿ ರಸ್ತೆಯಲ್ಲಿನ ಶಿವಜೋತಿನಗರ ಸೇರಿದಂತೆ ಹಲವು ಲೇಔಟ್ ಗಳಲ್ಲಿ ಫಾರಿನ್ ನಂಬರ್ ತ್ರೀ ಕೊಡುತ್ತಿಲ್ಲ ಇದರಿಂದ ಹಲವು ಸಮಸ್ಯೆಗಳಾಗುತ್ತಿದ್ದು ಸಾರ್ವಜನಿಕರಿಗೆ ನುಂಗಲಾರದ ತುತ್ತಾಗಿದೆ ದಯಮಾಡಿ ಇದನ್ನು ಪರಿಹರಿಸಿ ಎಂದು ಲೇಔಟ್ ಗಳ ನಿವಾಸಿಗಳಿಂದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಲೇಔಟ್ ಗಳ ನಿರ್ಮಾಣ ನಿಯಮಾನುಷರ ಆಗಬೇಕು ಇಲ್ಲದಿದ್ದಲ್ಲಿ ಇಂತಹ ಸಮಸ್ಯೆಗಳು ಸಾಮಾನ್ಯ. ಲೇಔಟ್ ಗಳಲ್ಲಿ ಜಮೀನು ಖರೀದಿ ಮುನ್ನ ಪರಿಶೀಲಿಸಿ. ಲೇಔಟ್ ಗಳ ಸಮಸ್ಯೆ ಪರಿಶೀಲಿಸಿ ನಿಯಮನುಸಾರ ಕ್ರಮ ಕೈಗೊಳ್ಳುವಂತೆ ಪೀಡಿಓ ಮನೋಹರ್ ಗೆ ಜಿಲ್ಲಾಧಿಕಾರಿ ಸೂಚಿಸಿದರು.

ಹೋರಾಟ ಮಾಡಿದರೆ ಕ್ರಮ

ಅಂಗನವಾಡಿ ಕೇಂದ್ರದಲ್ಲಿ ಸಮಸ್ಯೆಗಳಾದರೆ ಅಧಿಕಾರಿಗಳಿಗೆ ಸಂಪರ್ಕಿಸಿ. ಇಲ್ಲವೇ ನಮ್ಮ ಬಳಿ ಬನ್ನಿ ಪರಿಹಾರ ಕಂಡುಕೊಳ್ಳೊಣ್ಣ. ನಿಮ್ಮ ಕೆಲಸ ನೀವು ಮಾಡಿ. ಫಲ ಸಿಕ್ಕೆ ಸಿಗುತ್ತದೆ. ಸರ್ಕಾರದ ವಿರುದ್ಧ ಹೋರಾಟ, ಧರಣಿಗಳು ಮಾಡಿದರೆ ಕ್ರಮ ಕೋಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅಂಗನವಾಡಿ ಕಾರ್ಯಕರ್ತರಿಗೆ ಎಚ್ಚರಿಸಿದರು.

ಜನರಿಲ್ಲದ ಜನಸ್ಪಂಧನಾ

ತಾಲ್ಲೂಕುಗಳಲ್ಲಿ ಜನಸ್ಪಂಧನಾ ಕಾರ್ಯಕ್ರಮವನ್ನು ನಡೆಸಿ, ಜನರ ಅಹವಾಲು ಆಲಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜಿಲ್ಲಾಡಳಿತದಿಂದ ನೀಡಿದ ವೇಳಾಪಟ್ಟಿಯನ್ನು ಪಾಲಿಸಿಲ್ಲ. ಸಾರ್ವಜನಿಕರ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಜಂಟಿಯಾಗಿ ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ. ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಡಳಿತದಿಂದ ಪ್ರಕಟಣೆ ನೀಡಲಾಗಿತ್ತು. ಆದರೆ ಗ್ರಾಮೀಣ ಭಾಗದಲ್ಲಿ ಇದರ ಜಾಗೃತಿ ಅಧಿಕಾರಿಗಳು ಮಾಡುತ್ತಿಲ್ಲ. ಆದ್ದರಿಂದ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರಿಗಿಂತ ಇಲಾಖೆ ಸಿಬ್ಬಂದಿಗಳೆ ಹೆಚ್ಚಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net