

ಹೊಸಪೇಟೆ: ಕರ್ನಾಟಕ ಪಬ್ಲಿಕ್ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎಸ್‌ಎಫ್‌ಐ ಸಂಘಟನೆಯಿAದ ತಾಲೂಕಿನ ಗಾದಿಗನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪಗೆ ಗುರುವಾರ ಮನವಿ ಸಲ್ಲಿಸಿದರು.
ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಜಯಸೂರ್ಯ ಮಾತನಾಡಿ, ಗಾದಿಗನೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಆದರೆ ಶಾಲೆಯಲ್ಲಿ ಶೌಚಾಲಯ, ಕುಡಿವ ನೀರು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲ. ಹಾಗೂ ಧೈಹಿಕ ಶಿಕ್ಷಕರಿಲ್ಲದೆ ಕ್ರೀಡಾಭ್ಯಾಸ ಕೂಡ ನಡೆಯುತ್ತಿಲ್ಲ. ಸಮರ್ಪಕವಾಗಿ ಶುದ್ಧ ಕುಡಿವ ನೀರು ಮತ್ತು ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಮಾಡಬೇಕು. ಧೈಹಿಕ ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲೆಗೆ ವಚ್ಮೇನ್‌ರನ್ನು ನೇಮಕ ಮಾಡಬೇಕು. ಕೊಠಡಿಗಳು ಸೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪಿ.ಯು.ಕಾಲೇಜಿಗೆ ಖಾಯಂ ಶಿಕ್ಷಕರನ್ನ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಶಿವರೆಡ್ಡಿ ಮಾತನಾಡಿ, ಇಲ್ಲಿನ ವಿದ್ಯಾರ್ಥಿಗಳು ಮದ್ಯಹ್ನ ಊಟದ ನಂತರ ವಿದ್ಯಾರ್ಥಿಗಳು ತಮ್ಮ ತಟ್ಟೆ ಶುಚಿಗೊಳುಸಿಲು ಹೊರಗಡೆ ಹೋಗುವ ಪರಿಸ್ಥಿತಿ ಬಂದಿದೆ. ಹುಡುಗರಿಗೆ ಶೌಚಾಲಯ ಇಲ್ಲದೇ ಇರುವುದು ಖಂಡನಿಯ. ಆದ್ದರಿಂದ ಗ್ರಾಮ ಪಂಚಾಯಿತಿಯಿAದ ಮೂಲಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರಮುಖರಾದ ಲಕ್ಷ್ಮಿ, ಪವನ್ ಕುಮಾರ್, ಲೋಕೇಶ್, ವಿದ್ಯಾರ್ಥಿಗಳಾದ ಮಾನಸ, ಅಮೂಲ್ಯ, ಗಾದಿ, ಶಾಂತಮ್ಮ, ಅಂಜಲಿ ಇತರರಿದ್ದರು.