

ಹೊಸಪೇಟೆ: ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿಯಿಂದ ನಗರದ ಅಂಜುಮನ್ ಶಾದಿಮಹಲ್‌ನಲ್ಲಿ ಭಾನುವಾರ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಶೇ. 85ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹುಡಾ ಅಧ್ಯಕ್ಷ ಎಚ್.ಎನ್.ಮಹಮ್ಮದ್ ಇಮಾಮ್ ನಿಯಾಜಿ ಮಾತನಾಡಿ, ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಮೊದಲನೇ ಸಂದೇಶವೇ ವಿದ್ಯಾಭ್ಯಾಸವಾಗಿರುತ್ತದೆ. ವಿದ್ಯಾಭ್ಯಾಸಕ್ಕಾಗಿ ಪ್ರಪಂಚದ ಯಾವುದೇ ಮೂಲೆಗೆ ಬೇಕಾದರೂ ಹೋಗಿ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ಸಂದೇಶ ನೀಡಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಧರ್ಮದ ಜ್ಞಾನದ ಜತೆಗೆ ಪ್ರಾಪಂಚಿಕ ಜ್ಞಾನವನ್ನು ಸಹ ಮುಖ್ಯವಾಗಿ ಕಲಿಯಬೇಕಾಗಿರುತ್ತದೆ. ಉತ್ತಮ ವಿದ್ಯಾಭ್ಯಾಸವನ್ನು ಹೊಂದಿದಾಗ ಮಾತ್ರ ಐಎಎಸ್, ಐಪಿಎಸ್ ಸೇರಿ ಇತತರೆ ಉನ್ನತ ಹುದ್ದೆ ಪಡೆಯಲು ಸಾಧ್ಯ ಎಂದರು.
ಮುಸ್ಲಿA ಧರ್ಮ ಗುರು ಮೆಹಬೂಬ್ ಪೀರ ಸಾಬ್, ಅಂಜುಮನ್ ಕಮಿಟಿಯ ಉಪಾಧ್ಯಕ್ಷ ಎಮ್.ಎಮ್.ಫೈರೋಜ್ ಖಾನ್, ಕಾರ್ಯದರ್ಶಿ ಅಬೂಬಕ್ಕರ್ ಅಶ್ರಫಿ, ಖಜಾಂಚಿ ಅನ್ಸರ್ ಬಾಷಾ, ಜಂಟಿ ಕಾರ್ಯದರ್ಶಿ ಡಾ.ದುರ್ವೆಶ್ ಮೈನುದ್ದೀನ್, ಪ್ರಮುಖರಾದ ಸದ್ದಾಮ್ ಹುಸೇನ್, ಮೊಹಮ್ಮದ್ ಮೋಸಿನ್, ಗುಲಾಮ್ ರಸೂಲ್, ಖದೀರ್, ಮನ್ಸೂರ್ ಮತ್ತಿತರರಿದ್ದರು.