ರೈಲ್ವೆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಿ

26 MANJU 03
Published on

ಹೊಸಪೇಟೆ: ಈ ಭಾಗದ ವಿವಿಧ ರೈಲ್ವೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈಲ್ವೆ ಬಳಕೆದಾರರ ಸಂಘದಿAದ ನಗರದಲ್ಲಿ ಶನಿವಾರ ಬಳ್ಳಾರಿ ಸಂಸದ ಈ.ತುಕರಾಮ್‌ಗೆ ಮನವಿ ಸಲ್ಲಿಸಿದರು.

ಕಳೆದ 06 ತಿಂಗಳಿಂದ ಮಂದಗತಿಯಲ್ಲಿ ಸಾಗುತ್ತಿರುವ ಎಲ್.ಸಿ.ಗೇಟ್ ಅನಂತಶಯನಗುಡಿ ರೈಲ್ವೆ ಮೇಲ್ ಸೇತುವೆ ಕಾಮಗಾರಿಯ ನಿರ್ಮಾಣ ಕಾರ್ಯ ವಿಳಂಬದಿAದ ಸಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಹಲವು ರೀತಿಯ ಸಮಸ್ಯೆಗಳಾಗಿವೆ. ಮನೆ ಕಳೆದುಕೊಳ್ಳುತ್ತಿರುವ ನಿವಾಸಿಗಳಿಗೆ ರೈಲ್ವೆ ಇಲಾಖೆಯಿಂದ ಮಂಜೂರು ಆಗಿರುವ ಪರಿಹಾರ ವಿತರಣೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಹೊಸಪೇಟೆ ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿದ್ದು, ದೇಶ ವಿದೇಶದಿಂದ ಅಸಂಖ್ಯಾತ ಪ್ರವಾಸಿಗರು ರೈಲ್ವೆ ಮೂಲಕ ಆಗಮಿಸುತ್ತಿದ್ದಾರೆ. ಆದ್ದರಿಂದ ಹೊಸಪೇಟೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಹೆಚ್ಚುವರಿಯಾಗಿ ನೂತನ ಪ್ಲಾಟ್ ಫಾರಂಗಳನ್ನು ನಿರ್ಮಿಸಿ ರೈಲ್ವೆ ಟರ್ಮಿನಲ್ ಸೌಲಭ್ಯ ಒದಗಿಸಬೇಕು. ಹೊಸಪೇಟೆ ಮಾರ್ಗವಾಗಿ ವಾರದಲ್ಲಿ ಎರಡು ದಿನ ಸಂಚರಿಸುತ್ತಿರುವ ಹುಬ್ಬಳ್ಳಿ-ಹೊಸಪೇಟೆ-ಚನೈ ರೈಲನ್ನು ಪ್ರತಿನಿತ್ಯ ಸಂಚರಿಸುವAತೆ ಕ್ರಮ ಕೈಗೊಳ್ಳಬೇಕು. ಉತ್ತರ ಕರ್ನಾಟಕದಿಂದ ಮಂತ್ರಾಲಯ, ರಾಯಚೂರು ಕಡೆಗೆ ರದ್ದುಪಡಿಸಿರುವ ಬೆಳಗಾಂ-ಹೈದ್ರಬಾದ್-ಮಣಗೂರು ರೈಲನ್ನು ಪುನರ್ ಆರಂಭಿಸಬೇಕು. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕದ ನಡುವೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೊಟ್ಟೂರು-ದಾವಣಗೆರೆ ಮಾರ್ಗವಾಗಿ ಹೊಸಪೇಟೆಯಿಂದ ಮಂಗಳೂರಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ಅಗತ್ಯವಿದೆ. ಇದರಿಂದ ವಿಶ್ವ ಪಾರಂಪರಿಕ ತಾಣವಾದ ಹಂಪಿ-ಬೇಲೂರು ಹಳೆಬೀಡು-ಶ್ರವಣ ಬೆಳಗೋಳ-ಧರ್ಮಸ್ಥಳ-ಹಾಗೂ ಕುಕ್ಕೆಸುಬ್ರಮಣ್ಯ ನಡುವೆ ಸಂಪರ್ಕ ಉಂಟಾಗಿ ಪ್ರವಾಸೋಧ್ಯಮದ ಬೆಳವಣಿಗೆ ಆಗುತ್ತದೆ. ಹಾಗೂ ಶೈಕ್ಷಣಿಕ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಉನ್ನತ ವ್ಯಾಸಾಂಗಕ್ಕೆ ತೆರಳುವ ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಹೊಸಪೇಟೆ ಮುಂಬೈ (ಸಿಎಸ್‌ಟಿಎಂ) ಹಳೇ ಕೋಚ್‌ಗಳನ್ನು ಬದಲಾಯಿಸಿ, ಪೂರ್ಣ ಪ್ರಮಾಣದ ಎಲ್.ಎಚ್.ಬಿ.ಕೋಚ್‌ಗಳಾಗಿ ಪರಿವರ್ತಿಸಬೇಕು ಎಂದು ಒತ್ತಾಯಿಸಿದರು.

ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಮ್ ಪ್ರಮುಖರಾದ ವೈ.ಯಮುನೇಶ್, ಮಹೇಶ್ ಕುಡುತಿನಿ, ಮಂಜುನಾಥ, ದಿವಾಕರ್, ಆಶಲತಾ ಸೋಮಪ್ಪ, ಮಹೇಂದ್ರ ಕುಮಾರ್, ಕಾಂತಿಲಾಲ್, ನವರತನ್‌ಮಲ್, ಮಹೇಂದರ್ ಕಾನುಂಗಾ, ಮಹಾಂಗಿಲಾಲ್, ಅಶೋಕ್‌ಜೈನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net