ಸೆ.14ರಂದು ರಾಷ್ಟ್ರೀಯ ಲೋಕ ಆದಾಲತ್

Published on

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಸೆಪ್ಟಂಬರ್ 14ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ರಾಷ್ಟ್ರೀಯ ಲೋಕ ಆದಾಲತ್ ಕಾರ್ಯಕ್ರಮ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಇರುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಿಕೊಳ್ಳಬಹುದು ಎಂದು ಹೊಸಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net