ರಥೋತ್ಸವಕ್ಕೆ ವಿಶೇಷ ಬಸ್ ಸೌಕರ್ಯ

KSRTC BUS
Published on

ಹೊಸಪೇಟೆ: ಫೆ.22 ರಂದು ಜರುಗಲಿರುವ ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿಯ ರಥೋತ್ಸವಕ್ಕೆ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿವಿಧ ಘಟಕಗಳಿಂದ ಫೆ.21 ರಿಂದ ಫೆ.23 ರವರೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಭಾಗಗಳಿಂದ ವಿಶೇಷ ಸಾರಿಗೆ ಸೌಕರ್ಯವನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು, ಪ್ರಯಾಣಿಕರು, ಭಕ್ತಾದಿಗಳು ಈ ಸಾರಿಗೆ ಸೌಕರ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net