ಒಳಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯ ಬಂದ್

Oplus_131072
Oplus_131072
Published on

ಹೊಸಪೇಟೆ: ಒಳಮೀಸಲಾತಿ ಜಾರಿ ಸಂಬAಧ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆ.01ಕ್ಕೆ ವರ್ಷ ಪೂರ್ಣವಾಗುತ್ತಿದೆ. ಆ01ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

ನಗರ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠ್ಠಿಯಲ್ಲಿ ಮಾತನಾಡಿ, ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ವರ್ಷದಿಂದಲೂ ಮೀನ- ಮೇಷ ಎಣಿಸುತ್ತಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರಿಂದ ಇಂದಿಗೂ ವರದಿ ಪಡೆಯಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಪರಿಶಿಷ್ಟ ಜಾತಿಗಳಿಗಾಗಿ ನಡೆಸಿದ ಜನಗಣತಿಗೊಂದಲದ ಗೂಡಾಗಿದ್ದು, ಅದೂ ಸಮರ್ಪಕವಾಗಿ ನಡೆದಿಲ್ಲ. ಒಳಮೀಸಲಾತಿ ಜಾರಿಗೊಳಿಸುವ ಬದ್ಧತೆಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪ್ರದರ್ಶನ ಮಾಡುತ್ತಿಲ್ಲ. ಹೀಗಾಗಿ ನಾವು ಬೀದಿಗಿಳಿಯುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕೆಲವೇ ತಿಂಗಳುಗಳಲ್ಲಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಒಳಮೀಸಲಾತಿ ಜಾರಿಗೊಳಿಸಲಾಯಿತು. ದತ್ತಾಂಶ ಸಂಗ್ರಹ ನೆಪದಲ್ಲಿ ಆಯೋಗ ರಚಿಸಿದ ರಾಜ್ಯ ಸರ್ಕಾರ ದಿನ ದೂಡುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಒಳಮೀಸಲಾತಿ ಜಾರಿಗೊಳಿಸುವ ಪರವಾಗಿದ್ದಾರೆ. ಆದರೆ, ಕಾಂಗ್ರೆಸ್ ಮುಖಂಡರಿಗೆ ಬದ್ಧತೆ ಇಲ್ಲ ಎಂದು ದೂರಿದರು

ಮೂರು ದಶಕಗಳ ಹೋರಾಟದಿಂದ ದಣಿದಿದ್ದು, ನಮ್ಮ ಸಹನೆಯ ಕಟ್ಟೆ ಒಡೆದಿದೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಒಳಮೀಸಲಾತಿ ಜಾರಿಗೊಳಿಸದಿರುವುದು ಅಕ್ಷಮ್ಯ. ಆ.15ರವರೆಗೂ ನಾವು ಕಾಯುತ್ತೇವೆ. ನಂತರವೂ ಜಾರಿಗೊಳಿಸದಿದ್ದರೆ ಮಾದಿಗ ಸಮಾಜದ ಒಕ್ಕೂಟಗಳಿಂದ ರಾಜ್ಯ ಬಂದ್ ಆಚರಿಸಿ, ಆಡಳಿತ ಯಂತ್ರವನ್ನು ನಿಷ್ಕ್ರಿಯಗೊಳಿಸಿ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರಮುಖರಾದ ಎ.ವೀರಸ್ವಾಮಿ, ಮಂಜುನಾಥ, ಬಾಲಹುಣಸಿ ರಾಮಣ್ಣ, ಶೇಷು, ಬಸವರಾಜ, ವೆಂಕಪ್ಪ, ಸೇಲ್ವಂ, ಶ್ರೀನಿವಾಸ, ಶೇಕ್ಷವಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net