ಒಳ ಮೀಸಲಾತಿ ಕೂಡಲೇ ಜಾರಿ ಮಾಡಿ

13 MANJU 03
Published on

ಹೊಸಪೇಟೆ: ಸುಪ್ರೀಂ ಕೋರ್ಟ್ ನೀಡಿರುವ ಒಳ ಮೀಸಲಾತಿ ತೀರ್ಪನ್ನು ಸರ್ಕಾರ ಕೂಡಲೇ ಜಾರಿ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ)ದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಆದೇಶ ಪಾಲನೆ ಮಾಡಬೇಕು. ಆ.01 ರಂದು ನೀಡಿರುವ ಆದೇಶವನ್ನು ಜಾರಿ ಮಾಡಬೇಕು. ಇದೊಂದು ಐತಿಹಾಸಿಕ ಆದೇಶವಾಗಿದೆ. ಈ ಆದೇಶವನ್ನು ಪಾಲನೆ ಮಾಡಿದರೆ ಕಳೆದ ಹಲವು ದಶಕಗಳಿಂದ ಅನ್ಯಾಯಕ್ಕೊಳಗಾಗಿರುವ ಜಾತಿಗಳಿಗೆ ಅನುಕೂಲ ಆಗಲಿದೆ. ಆಂಧ್ರಪ್ರದೇಶ, ಪಂಜಾಬ್, ತಮಿಳುನಾಡು ಸರ್ಕಾರಗಳು ಒಳ ಮೀಸಲಾತಿ ನೀಡಲು ಮುಂದಾಗಿದ್ದವು. ಆದರೆ, ನ್ಯಾಯಾಲಯದ ಆದೇಶಗಳಿಂದ ಹಿನ್ನಡೆಯಾಗಿದ್ದವು. ಈಗ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರಿಂದ ಶೋಷಣೆಗೊಳಗಾದ ಜಾತಿಗಳಿಗೆ ಇದರಿಂದ ಅನುಕೂಲ ಆಗಲಿದೆ. ರಾಜ್ಯ ಸರ್ಕಾರ ಈ ಕೂಡಲೇ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಬೇಕು ಎಂದು ಆಗ್ರಹಿಸಿದರು.

ಪ್ರೊ.ಬಿ.ಕೃಷ್ಣಪ್ಪ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು. ಜೂ.09ರಂದು ಅವರ ಜನ್ಮದಿನ ಸರ್ಕಾರಿ ಕಾರ್ಯಕ್ರಮ ಎಂದು ಆಚರಿಸಬೇಕು. ಸರ್ಕಾರ ಒಳ ಮೀಸಲಾತಿ ಕಲ್ಪಿಸುವವರೆಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬಾರದು. ಬ್ಲಾಕ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net