

ಹೊಸಪೇಟೆ: ಒಳಮೀಸಲಾತಿಗೆ ಸಂಬAಧಿಸಿದAತೆ ರಚಿಸಲಾಗಿರುವ ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಹುಣಸಿ ರಾಮಣ್ಣ ಒತ್ತಾಯಿಸಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬAಧ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಡಗಾಲು ಹಾಕಿದ್ದಾರೆ. ಖರ್ಗೆಗೆ ಸಿಎಂ ಸಿದ್ದರಾಮಯ್ಯ ಹೆದರಿ ವಿಳಂಬ ಧೋರಣೆ ಅನುಸರಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿದರು.
ಹೊಸ ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಂಘಟನೆಗಳ ಒಳಮೀಸಲಾತಿ ಹೋರಾಟಗಾರರ ಬೇಡಿಕೆಯಾಗಿರಲಿಲ್ಲ. ಈಗಾಗಲೇ ಸರ್ಕಾರದ ಮುಂದೆ ನ್ಯಾ.ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ, ೨೦೧೧ರ ಜನಗಣತಿಯ ದತ್ತಾಂಶಗಳಿವೆ. ಈ ನಡುವೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಕೈಬಿಟ್ಟು ಕೂಡಲೇ ಮಧ್ಯಂತರ ವರದಿ ಜಾರಿ ಮಾಡಬೇಕು. ಹಲವಾರು ವರ್ಷಗಳಿಂದ ಒಳಮೀಸಲಾತಿ ಸಂಬAಧ ಹೋರಾಟ ನಡೆಸಲಾಗುತ್ತಿದೆ. ಇದೀಗ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಸರ್ಕಾರ ಮೀಸಲಾತಿ ಜಾರಿಗೆ ಮಧ್ಯಂತರ ವರದಿಯನ್ನು ಜನವರಿ ೩೧ಕ್ಕೆ ಘೋಷಣೆ ಮಾಡಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರಮುಖರಾದ ಮಂಜುನಾಥ, ಪೂಜಾಪ್ಪ, ಪಿ.ಲಿಂಗಪ್ಪ, ಎಸ್.ದುರುಗೇಶ್, ಎಚ್.ಲಕ್ಷö್ಮಣ ಇದ್ದರು.