ಮೀಸಲು ಭರ್ತಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಈ ಸಾಲಿನ 6ನೇ ತರಗತಿಗೆ ಖಾಲಿ ಇರುವ ವಿಶೇಷ ಮೀಸಲು ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಜು.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ ಒಟ್ಟು 110 ಖಾಲಿ ಸ್ಥಾನಗಳು ಲಭ್ಯವಿದ್ದು ವಿಶೇಷ ವರ್ಗದವರಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು ಹತ್ತಿರದ ವಸತಿ ಶಾಲೆಗಳಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net