ಮಾನವ ಹಕ್ಕುಗಳ ದಿನಾಚರಣೆಗೆ ಕಡ್ಡಾಯ

Published on

ಹೊಸಪೇಟೆ: ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರದ ಕಚೇರಿಯಲ್ಲಿ ಕಡ್ಡಾಯವಾಗಿ ಡಿ.10 ರಂದು ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರ ಅದೇಶಿಸಿದ್ದಾರೆ.

ರಾಜ್ಯ ಮಾನವ ಹಕ್ಕುಗಳ ಆಯೋಗವು ಪ್ರತಿ ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ವಿಶೇಷವಾಗಿ ಆಚರಿಸಲು ಆಯೋಗವು ನಿರ್ಧಾರವನ್ನು ಕೈಗೊಂಡಿದೆ. ಆಯೋಗದ ನಿರ್ದೇಶನದಂತೆ, ಡಿ.10 ರಂದು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net