

ಹೊಸಪೇಟೆ: ರಸ್ತೆಗಳ ಮೇಲಿನ ಗುಂಡಿಗಳನ್ನು ಗುರುತಿಸಿ ಕೂಡಲೇ ಮುಚ್ಚುವ ಮೂಲಕ ಅವಘಡಗಳನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಚೇಗೆ ರಸ್ತೆಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಮಳೆಯಿಂದಾಗಿ ರಸ್ತೆಗಳ ಮೇಲೆ ನೀರು ನಿಂತು ಗುಂಡಿಗಳು ಕಾಣದೇ ಸವಾರರು ಅವಘಡಗಳನ್ನು ಅನುಭವಿಸುತ್ತಿದ್ದಾರೆ. ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯದೇ ಅನೇಕ ದುರ್ಘಟನೆಗಳು ಸಂಭವಿಸಿವೆ. ಈಗಲಾದರೂ ಎಚ್ಚೆತ್ತು ಅಧಿಕಾರಿಗಳು ರಸ್ತೆಗಳ ನಿರ್ವಹಣೆಗೆ ಕಾರ್ಯೋನ್ಮುಖರಾಗಬೇಕು. ಎನ್‌ಎಚ್‌ಎಐ ಅಧಿಕಾರಿಗಳ ಸಭೆಯಲ್ಲಿ ರಾಷ್ಟಿçÃಯ ಹೆದ್ದಾರಿಯಲ್ಲಿ ಒಟ್ಟು 6 ಕಡೆ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಈಗಾಗಲೇ 5 ಬ್ಲಾಕ್ ಸ್ಪಾಟ್‌ಗಳನ್ನು ಸರಿಪಡಿಸಲಾಗಿದೆ ಎಂದು ವರದಿ ನೀಡಲಾಗಿದೆ. ತಾಲೂಕಿನ ಡಣಾಪುರ ಕ್ರಾಸ್ ಬಳಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ವಿದ್ಯುತ್ ದೀಪಗಳಿಲ್ಲದೇ ಕತ್ತಲು ಆವರಿಸಿದೆ. ಅದೇ ರಸ್ತೆಯಲ್ಲಿ ಬರುವ ಆರು ಹಳ್ಳಿಗಳಿಗೆ ಸಂಪರ್ಕಿಸುವ ರಸ್ತೆ ಮಾರ್ಗದಲ್ಲಿ ವಿದ್ಯುತ್ ದೀಪ ಇಲ್ಲದೇ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ಕೂಡಲೇ ಕ್ರಮವಹಿಸಬೇಕು. ಅರಸೀಕೆರೆಯಿಂದ ಮತ್ತಿಹಳ್ಳಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಎರಡು ಕಿಲೋಮೀಟರ್ ನಷ್ಟು ರಸ್ತೆ ವಾಹನಗಳು ಸಂಚರಿಸಲು ಸಂಪೂರ್ಣ ಹದಗೆಟ್ಟಿದೆ ಶೀಘ್ರ ರಸ್ತೆ ಕಾಮಗಾರಿ ಸರಿಪಡಿಸಬೇಕು. ರಾಷ್ಟಿçÃಯ ಹೆದ್ದಾರಿಗೆ ಸಂಪರ್ಕಿಸುವ ಸೇವಾ ರಸ್ತೆಗಳಲ್ಲಿ ಸೂಕ್ತ ನಾಮಫಲಕಗಳು, ರಸ್ತೆ ಅಡೆತಡೆಗಳನ್ನು ಅಳವಡಿಸಬೇಕು ಎಂದರು.
ಎಸ್ಪಿ ಬಿ.ಎಲ್.ಶ್ರೀಹರಿಬಾಬು ಮಾತನಾಡಿ, ಡಾ.ಪುನೀತ್ ರಾಜಕುಮಾರ ವೃತ್ತದ ಬಳಿ ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ ನಿಯೋಜಿಸಬೇಕಿದೆ. ನಗರದ ರಾಷ್ಟಿçÃಯ ಹೆದ್ದಾರಿಯ ಟನಲ್‌ನಲ್ಲಿ ಸಿಸಿ ಕ್ಯಾಮರಾಗಳನ್ನು ಆಳವಡಿಸಲು ಕ್ರಮವಹಿಸಬೇಕು. ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ರಸ್ತೆಗೆ ಅಡ್ಡಲಾಗಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸಬೇಕು. ಜಿಲ್ಲೆಯ ಆಟೋ ನಿಲ್ದಾಣ ನಿರ್ಮಾಣ ಮಾಡಲು ಸ್ಥಳ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಒಟ್ಟು 20 ಆಟೋ ಸ್ಟಾಂಡ್‌ಗಳನ್ನು ಗುರುತಿಸಿದ್ದು, ಈಗಾಗಲೇ 10 ಹಂತಗಳಲ್ಲಿ ನಿರ್ಮಿಸಲು ಸೂಚಿಸಿದರು. ಮೊದಲ ಹಂತದಲ್ಲಿ ಪ್ರತಿಯೊಂದು ಸ್ಟಾಂಡ್‌ಗಳಲ್ಲಿ ಕನಿಷ್ಠ 10 ರಿಂದ 15 ಆಟೋಗಳನ್ನು ನಿಲ್ಲಿಸಲು ಅನುಕೂಲ ಕಲ್ಪಿಸಬೇಕಿದೆ ಎಂದರು.