ಮುಖ್ಯಸಚೇತಕರಪ್ರವಾಸ

Published on

ಹೊಸಪೇಟೆ : ರಾಜ್ಯ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೆ.24ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡುದ್ದಾರೆ.

ಸರ್ಕಾರಿ ಮುಖ್ಯ ಸಚೇತಕರು ಅಂದು ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ, 4 ಗಂಟೆಗೆ ಹೊಸಪೇಟೆಗೆ ಆಗಮಿಸಿ, ಸಂಜೆ 4 ರಿಂದ 7ರವರೆಗೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಜಿಲ್ಲೆಯ ಪಕ್ಷದ ವಿವಿಧ ಹಂತದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು ಎಂದು ಅವರ ಆಪ್ತ ಕಾರ್ಯದರ್ಶಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net