ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆ

Published on

ಹೊಸಪೇಟೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಹಿರಿಯ ನಾಗರಿಕರು ಎಲ್ಲಾ ಅಗತ್ಯ ಮಾಹಿತಿಯೊಂದಿಗೆ ಸೆ.6 ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿ, ನಗರ ಸಭೆ ಹಾಗೂ ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ತಾಲೂಕು ಪಂಚಾಯತಿ ಆವರಣದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net