ಸ್ವಾವಲಂಬಿ ಮಹಿಳೆಯರಿಂದ ದೇಶದ ಅಭಿವೃದ್ಧಿ

Oplus_16908288
Oplus_16908288
Published on

ಹೊಸಪೇಟೆ: ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಾಗ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ತಹಸೀಲ್ದಾರ್ ಶೃತಿ ಎಂ.ಮಳ್ಳಪ್ಪ ಗೌಡ್ರ್ ಹೇಳಿದರು.

ತಾಲೂಕಿನ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಮಂಗಳವಾರ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ನಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆ ಸ್ವಯಂ ಉದ್ಯೋಗ ಪಡೆದುಕೊಂಡಾಗ ಕುಟುಂಬವನ್ನು ಆರ್ಥಿಕ ಸಂಕಷ್ಟದಿAದ ದೂರು ಮಾಡುವುದಕ್ಕೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಮಹಿಳೆಯರು ಸ್ವಯಂ ಉದ್ಯೋಗದ ಮೂಲಕ ಸಬಲೀಕರಣರದಾಗ ಮಾತ್ರ ದೇಶ ಅಭಿವೃದ್ಧಿ ಹೊಂದುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ಪಿಎಸ್.ಐ ತಾರಾ ಬಾಯಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೌಶಲ್ಯ ಅಭಿವೃದ್ಧಿಗಳಿಂದ ಮಾತ್ರ ನಾವು ಸ್ವಯಂ ಉದ್ಯೋಗ ಕಂಡುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ನೀವು ಸರಿಯಾಗಿ ತರಬೇತಿ ಪಡೆದುಕೊಂಡು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಿದಾಗ ನೀವು ಕಲಿತಿದ್ದು ಸಾರ್ಥಕವಾಗುತ್ತದೆ ಎಂದರು.

ಡಣಾಯಕನಕೆರೆ ಗ್ರಾ.ಪಂ ಉಪಾಧ್ಯಕ್ಷೆ ನೇತ್ರಾ ಸೂರ್ಯಪ್ರಕಾಶ, ಪಿಡಿಒ ಜಿಲಾನ್ ಸಾಬ್, ಸದಸ್ಯರಾದ ಲಕ್ಷ್ಮೀದೇವಿ, ನಾಗಪ್ಪ, ಪ್ರಮುಖರಾದ ಕಾರ್ಯದರ್ಶಿ ಯು.ಆರ್.ಉಷಾ, ಯು.ಶ್ಯಾವಪ್ಪ, ಅಶೋಕ, ರಾಘವೇಂದ್ರ ಯು.ಪರಶುರಾ, ನಾಗರಾಜ, ತಳವಾರ ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net