ಹೊಸಪೇಟೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿಗೆ ಕುರಿ, ಮೇಕೆ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ..ಅರ್ಜಿ ಸಲ್ಲಿಸಲು ಡಿ.16 ಕೊನೆ ದಿನವಾಗಿದೆ ಎಂದು ನಗರದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.