ಸೌರ ಫಲಕಕ್ಕೆ ಶೇ.60 ರಷ್ಟು ಸಹಾಯಧನ

Published on

ಹೊಸಪೇಟೆ: ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ ಬಿಜಲಿ ಯೋಜನೆಯ ಅಡಿಯಲ್ಲಿ ಸೌರ ಫಲಕಗಳನ್ನು ಸ್ಥಾಪಿಸಲು ಮಾನದಂಡ ವೆಚ್ಚದ ಶೇ.60 ರಷ್ಟು ಸಹಾಯಧನ ಒದಗಿಸಲಾಗುವುದು.

ಸೋಲಾರ್ ರೂಫ್ ಟಾಪ್ ಸಿಸ್ಟಮ್‌ಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿರುವ ಸರ್ಕಾರದ ಯೋಜನೆ ಇದಾಗಿದ್ದು, ಭಾರತದ 1 ಕೋಟಿ ಕುಟುಂಬಗಳಿಗೆ ಲಾಭವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಒಂದು ಕಿಲೋವ್ಯಾಟ್‌ಗೆ 30 ಸಾವಿರ ರೂ.2 ಕಿಲೋವ್ಯಾಟ್‌ಗೆ ರೂ.60 ಸಾವಿರ, 3ಕಿಲೋವ್ಯಾಟ್‌ಗೆ 78 ಸಾವಿರ ರೂಪಾಯಿಗಳ ಸಹಾಯಧನ ನೀಡಲಾವುದು.

ಅರ್ಜಿ ಸಲ್ಲಿಸಲು ವೆಬ್ ಲಿಂಕ್ Login:www.pmsuryaghar.gov.in, https://gescomsrtpv.in/SRTPV ಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 1912 ಗೆ ಕರೆಮಾಡಿ ಅಥವಾ ಹತ್ತಿರದ ಜೆಸ್ಕಾಂ ಕಚೇರಿಗೆ ಭೇಟಿ ನೀಡಬಹುದಾಗಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net