ಎಸ್ಸೆಸ್ಸೆಲ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಯಲಿ

news
ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸಭೆ ನಡೆಸಿದರು.
Published on

ಹೊಸಪೇಟೆ: ಯಾವುದೇ ರೀತಿಯ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದರು.

ಆ.02ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ನಿಮಿತ್ತ ಚರ್ಚಿಸಲು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಯಲ್ಲಿ ಮಾತನಾಡಿದರು.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಠಡಿ ಮೇಲ್ವಿಚಾರಕರು, ಪ್ರೌಢಶಾಲಾ ಶಿಕ್ಷಕರು, ವೀಕ್ಷಕರು ಹಾಗೂ ಇತರೆ ಪರೀಕ್ಷಾ ನಿಯೋಜಿತ ಸಿಬ್ಬಂದಿ ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡು ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು. ಎಲ್ಲಾ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಉಪ ನಿರ್ದೇಶಕರ ಕಾರ್ಯಾಲಯದಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆಯ ನೇರ ಪ್ರಸಾರ ಇರುವುದರಿಂದ ಅಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಡಿಡಿಪಿಐ ಎ.ಹನುಮಕ್ಕ ಮಾತನಾಡಿ, ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3165 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆ.02 ರಿಂದ ಆ.09ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು. ನೋಡಲ್ ಅಧಿಕಾರಿ ಎಚ್.ಎಮ್.ಹುಲಿಬಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net