ತರಬೇತಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ  ಆಡಳಿತ ನ್ಯಾಯಾಧೀಕರಣದಲ್ಲಿ ಕಾನೂನು ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅ.7 ಕೊನೆಯ ದಿನವಾಗಿದೆ. ಆಭ್ಯರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್  www.tw.kar.nic.in  ಗೆ ಭೇಟಿ ನೀಡಿ,  applications  ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net