ರಾಜ್ಯಮಟ್ಟದ ಜಕಣಾಚಾರಿ ಸಂಸ್ಮರಣಾ ದಿನ

KV Pattara
ಕೆ.ವಿ.ಪತ್ತಾರ.
Published on

ಹೊಸಪೇಟೆ: ರಾಜ್ಯ ಸರ್ಕಾರ, ವಿಶ್ವಕರ್ಮ ಸಮಾಜ ಸಂಘ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ಆಚರಿಸಲಾಗುತ್ತಿರುವ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಹೊಸಪೇಟೆಯಲ್ಲಿ ಜ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಪತ್ತಾರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಹಮ್ಮಿಕೊಳ್ಳಲಾಗುತ್ತಿದೆ. ಅಂದು ಸಂಜೆ ಡಾ.ಪುನೀತ್ ರಾಜಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ ಉದ್ಘಾಟಿಸುವರು. ಸಚಿವ ಆನಂದ್ ಸಿಂಗ್, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಮತ್ತಿತರೆ ಪ್ರಮುಖರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಅದಕ್ಕೂ ಮುನ್ನ ಮೇನ್ ಬಜಾರ್‌ನಲ್ಲಿರುವ ಕಾಳಿಕಾ ದೇವಸ್ಥಾನದಿಂದ ಮಧ್ಯಾಹ್ನ ಶಿಲ್ಪ ಕಲಾಕೃತಿಗಳ ಸ್ಥಬ್ಧಚಿತ್ರಗಳೊಂದಿಗೆ ಜಕಣಾಚಾರಿ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, 3 ಸಾವಿರಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರಾಜ ಬಡಿಗೇರ್, ತಾಲೂಕು ಅಧ್ಯಕ್ಷ ವೀರಭದ್ರಪ್ಪ ಆಚಾರ್, ಪ್ರಧಾನ ಕಾರ್ಯದರ್ಶಿ ವಿ.ಶಂಕರಾಚಾರ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net