ಎಸ್ಸಿ ಸಮೀಕ್ಷೆ ಅವಧಿ ವಿಸ್ತರಣೆ

Published on

ಹೊಸಪೇಟೆ: ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ತಿಳಿಸಿದ್ದಾರೆ.

ಮೊದಲ ಹಂತ ಮನೆ ಸಮೀಕ್ಷೆ ಮೇ.25 ರವರೆಗೆ ವಿಸ್ತರಿಸಲಾಗಿದೆ. ಎರಡನೇ ಹಂತ ವಿಶೇಷ ಶಿಬಿರ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಮೇ.26 ರಿಂದ ಮೇ.28 ರವರೆಗೆ ಮರುನಿಗಧಿಪಡಿಸಲಾಗಿದೆ. ಮೂರನೇ ಹಂತ ಅನ್‌ಲೈನ್ ಮೂಲಕ ಸ್ವಯಂಘೋಷಣೆಯನ್ನು ಮೇ.19 ರಿಂದ ಮೇ.28 ರವರೆಗೆ ನಿಗಧಿಪಡಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳ ವ್ಯವಸ್ಥೆಕಲ್ಪಿಸಲಾಗಿದೆ. ಸಮೀಕ್ಷೆಯ ಕುರಿತು ಯಾವುದೇ ಮಾಹಿತಿಗಳಿದ್ದಲ್ಲಿ ಆಯಾ ವ್ಯಾಪ್ತಿಯ ಕಂಟ್ರೋಲ್ ರೂಂ ಅಥವಾ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net