ತಾಲೂಕು ಮಟ್ಟದ ದಸಾರ ಕ್ರೀಡಾಕೂಟ

Published on

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶಯದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು ಸೆ.25ರಂದು ಆಯೋಜಿಸಲಾಗಿದೆ.

ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಟಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್ ಮತ್ತು ಯೋಗವನ್ನು ಆಯೋಜಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net