ಟಿಬಿಡ್ಯಾಂಗೆ ಆ.6 ರಂದುಸಿಎಂ ಬಾಗಿನ ಸಮರ್ಪಣೆ

news
ತುಂಗಭದ್ರಾ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹಾಗೂ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಭೇಟಿ ನೀಡಿ ಪರಿಶೀಲನೆ ಮಾಡಿದರು.
Published on

ಹೊಸಪೇಟೆ: ಎರಡು ವರ್ಷಗಳ ಬಳಿಕ ತುಂಬಿದ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.6 ರಂದು ಮೊದಲ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಿಎಂ ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ ಹೊರಟು 11.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.15ಕ್ಕೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮರಳಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ತಿಳಿಸಿದ್ದಾರೆ.

ಅಧಿಕಾರಿಗಳ ಪರಿಶೀಲನೆ:

ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹಾಗೂ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಸೀಲ್ದಾರ್ ಶೃತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net