10 ಕೋಟಿ ರೂಪಾಯಿಯಲ್ಲಿ ಕ್ರೀಡಾ ಶಾಲೆ ನಿರ್ಮಾಣ

oplus_0
oplus_0
Published on

ಹೊಸಪೇಟೆ: ಶಾಲೆಗಳ ಅಭಿವೃದ್ಧಿ ಸೇರಿ ಅಗತ್ಯ ಮೂಲಸೌಲಭ್ಯಗಳನ್ನು ಸರ್ಕಾರದಿಂದ ನೀಡಬಹುದೇ ವಿನಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಶಿಕ್ಷಕರೇ ನೀಡಬೇಕು. ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ನಿಮಿತ್ತ ನಗರದ ಸಾಯಿಲೀಲಾ ರಂಗಮAದಿರದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೈಕ್ಷಣಿಕ ಪ್ರಗತಿಗೆ ಮೊದಲ ಆದ್ಯತೆ ನೀಡಲಾಗಿದೆ. ನಗರದ ಜಿಲ್ಲಾ ಕ್ರೀಡಾಂಗಣದ ಬಳಿ 5 ಕೋಟಿ ರೂ ವೆಚ್ಚದಲ್ಲಿ ಕ್ರೀಡಾ ಶಾಲೆ, ಕ್ರೀಡಾಪಟುಗಳಿಗೆ ತರಬೇತಿ ಮತ್ತು ವಸತಿ, ಶೌಚಗೃಹ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತದೆ. ತಾಲೂಕಿನಲ್ಲಿ ಐದು ಪ್ರೌಢಶಾಲೆಗಳನ್ನು ಆಯ್ಕೆ ಮಾಡಿಕೊಂಡು ಮಾದರಿಯುತ ತಂತ್ರಜ್ಞಾನ ಸಹಿತ ಅಭಿವೃದ್ಧಿ ಸ್ಮಾರ್ಟ್ ಶಾಲೆಗಳನ್ನಾಗಿ ಪರಿವರ್ತಿಸಲು ಯೋಜನೆಯನ್ನು ರೂಪಿಸಲಾಗಿದೆ. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳನ್ನು ನೀಡಬೇಕು. ಮಕ್ಕಳು ಮುಂದಿನ ದೇಶದ ಪ್ರಜೆಗಳು ಅವರ ಭವಿಷ್ಯ ಎಲ್ಲಾ ಶಿಕ್ಷಕರ ಕೈಯಲ್ಲಿದೆ ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಫÀಲಿತಾಂಶ ಆಶಾದಾಯಕವಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 18 ನೇ ಸ್ಥಾನದಲ್ಲಿದ್ದು, ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿದೆ. ಮುಂದಿನ ಫಲಿತಾಂಶದಲ್ಲಿ ಇದಕ್ಕಿಂತ ಹೆಚ್ಚಿನ ಪ್ರಗತಿಯನ್ನು ನೀರಿಕ್ಷಿಸಲಾಗಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಎಲ್ಲಾ ಶಿಕ್ಷಕ ವೃಂದ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಮುನ್ನುಡಿ ಬರೆಯಬೇಕು ಎಂದರು.

ಎಸ್ಪಿ ಎಸ್.ಜಾಹ್ನವಿ ಮಾತನಾಡಿ, ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ. ಮಕ್ಕಳಿಗೆ ನೈತಿಕತೆಯ ಶಿಕ್ಷಣ ನೀಡುವ ಜತೆಗೆ ಸಮಾಜಕ್ಕೆ ಮಾದರಿಯುತ ವ್ಯಕ್ತಿತ್ವಗಳನ್ನು ರೂಪಿಸುವುದು ಶಿಕ್ಷಕರ ಹೊಣೆಯಾಗಿದೆ. ವಿಶ್ವದಲ್ಲೇ ಪವಿತ್ರವಾದ ವೃತ್ತಿಯೊಂದಿದ್ದರೇ ಶಿಕ್ಷಕ ವೃತ್ತಿಯಾಗಿದೆ ಎಂದರು.

ವಿಶ್ರಾAತ ಪ್ರಾಧ್ಯಾಪಕ ಡಾ.ಶಿವಾನಂದ ಉಪನ್ಯಾಸ ನೀಡಿದರು. ಬಳಿಕ ರಾಜ್ಯ ಮಟ್ಟದ ಉತ್ತಮ ಶಿಕ್ಷಕರು ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರು ಸೇರಿದಂತೆ ನಿವೃತ್ತ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಅಧ್ಯಕ್ಷ ಕೆ.ಶಿವಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಡಯಟ್ ಉಪನಿರ್ದೇಶಕ ಜೆ.ಎಂ.ತಿಪ್ಪೇಸ್ವಾಮಿ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ, ಬಿಇಒ ಶೇಖರಪ್ಪ ಹೊರಪೇಟೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net