

ಹೊಸಪೇಟೆ: ತಂಬಾಕಿನಿAದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ, ತಂಬಾಕಿನಿAದ ಮಕ್ಕಳನ್ನು ದೂರವಿಡಲು ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಹಾಗೂ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲಾ ಕಾಲೇಜುಗಳ 100 ಗಜದ ಸುತ್ತಳತೆಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. ಮಾರಾಟ ಮಾಡುವುದು ಕಂಡುಬAದರೆ ಅಂತವರ ವಿರುದ್ಧ ಕ್ರಮಕೈಗೊಂಡು ದಂಡ ವಿದಿಸಬೇಕು. ಮಾರಾಟ ಮಾಡುವ ಅಂಗಡಿಗಳ ಸಂಖ್ಯೆ ಹಾಗೂ ತಂಬಾಕು ಮಾರಾಟ ಮಾಡುವ ಅಂಗಡಿಗಳಿಗೆ ತಂಬಾಕು ಪರವಾನಿಗಿ ನೀಡಿದ ಸಂಖ್ಯೆಗಳ ಸಂಪೂರ್ಣ ವರದಿ ನೀಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರ ವಿರುದ್ಧ ಕ್ರಮ ವಹಿಸಬೇಕು. ಹೆಚ್ಚಿನ ಜಾಗೃತಿ ಮೂಡಿಸಬೇಕು. ಪ್ರತಿ ತಿಂಗಳು 5ರಂದು ನಿಗದಿತ ನಮೂನೆಯಲ್ಲಿ ಇಲಾಖೆಗಳ ಮುಖ್ಯಸ್ಥರು ಪ್ರಕರಣಗಳನ್ನು ದಾಖಲಿಸಿದ ವಿವರ ಹಾಗೂ ದಂಡದ ಹಣ ಸಂಗ್ರಹಿಸಿದ ಮಾಹಿತಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಜಿ.ಪಂ. ಉಪ ಕಾರ್ಯದರ್ಶಿ ಬೀಮಪ್ಪ ಲಾಳಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರಮತ್ತೂರ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಷಣ್ಮುಖ ನಾಯಕ, ಜಿಲ್ಲಾ ಆರೋಗ್ಯ ಶಿಕ್ಷಾಣಾಧಿಕಾರಿ ಎಂ.ಪಿ.ದೊಡ್ಡಮನಿ ಇದ್ದರು.