ಸುಸಜ್ಜಿತ ಶೌಚಗೃಹ ನಿರ್ಮಿಸಿ

04 MANJU 03
Published on

ಹೊಸಪೇಟೆ: ಇಲ್ಲಿನ ಭಗತ್ ಸಿಂಗ್ ನಗರದ ಮಹಿಳೆಯರು ಸಾರ್ವಜನಿಕ ಶೌಚಗೃಹ ನಿರ್ಮಿಸಿಕೊಡುವಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಸರ್ಕಾರದ ಹಣ ದೋಚುವುದಕ್ಕಾಗಿ ನಗರದಲ್ಲಿ ಕಾಟಾಚಾರಕ್ಕೆ ಹಲವಡೆ ಶೌಚಗೃಹ ನಿರ್ಮಿಸಿದ್ದಾರೆ. ಆದರೆ ಅವುಗಳಿಗೆ ಮೂಲ ಸೌಕರ್ಯಗಳಿಲ್ಲದೆ ಮಹಿಳೆಯರು ಪರದಾಡುವಂತಾಗಿದೆ. ನಗರಸಭೆಗೆ ಸರ್ಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದರೂ, ಕನಿಷ್ಟ ಸುಸಜ್ಜಿತ ಶೌಚಗೃಹ ನಿರ್ಮಾಣ ಮಾಡದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಭಗತ್ ಸಿಂಗ್ ನಗರದ ನಗರಸಭೆ ವ್ಯಾಪ್ತಿಯಲ್ಲಿ ಬರುವ ತಗ್ಗು ಪ್ರದೇಶದಲ್ಲಿ ಸುಸಜ್ಜಿತ ಶೌಚಾಗೃಹ ನಿರ್ಮಾಣ ಮಾಡಿಕೊಡುವಂತೆ ಮಹಿಳೆಯರು ಒತ್ತಾಯಿಸಿದರು. ಈಗಾಗಲೇ ಇರುವ ಶೌಚಗೃಹ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ. ಇದರಿಂದ ಕಾಲುವೆ ದಂಡೆಗೆ ಬಯಲು ಬಹಿರ್ದೆಸೆ ಹೋಗುವುದು ಅನಿವಾರ್ಯವಾಗಿದೆ. ಕೆಲ ಕುಡುಕರ ಹಾವಳಿಯಿಂದ ಬೇಸತ್ತು ಹೋಗಿದ್ದೇವೆ. ದಯವಿಟ್ಟು ನಮ್ಮ ಸಮಸ್ಯೆಗೆ ಪರಿಹಾರ ಒದಗಿಸಿ ಎಂದು ಮಹಿಳೆಯರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net