ಆನ್‌ಲೈನ್ ವೋಟಿಂಗ್ ಕ್ಯಾಂಪೇನ್ ಆರಂಭ

Published on

ಹೊಸಪೇಟೆ: ಪ್ರವಾಸೋದ್ಯಮವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲದಿಂದ ದೇಖೋ ಅಪ್ನಾ ದೇಶ್, ಪೀಪಲ್ಸ್ ಚಾಯಿಸ್ 2024 (Dekho Apna Desh, People’s Choice 2024)  ಎಂಬ ಆನ್‌ಲೈನ್ ವೋಟಿಂಗ್ ಕ್ಯಾಂಪೇನ್ ಪ್ರಾರಂಭಿಸಿದ್ದು, ಪ್ರವಾಸಿ ತಾಣಗಳಿಗೆ ವೋಟ್ ಮಾಡಲು ಸೆ.15 ವರೆಗೆ ಅವಕಾಶ ಕಲ್ಪಿಸಲಾಗಿದೆ.

ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ಪೂರಕವಾಗುವಂತೆ https://innovateindia.mygov.in/dekho-apna-desh /ನಲ್ಲಿ ಲಾಗಿನ್ ಆಗುವ ಮೂಲಕ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ವೋಟ್ ಮಾಡಿ ಪ್ರಮಾಣ ಪತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net