ನೆಮ್ಮದಿ ಬದುಕಿಗೆ ಸಹಕರಿಸಿ

25 MANJU 02
Published on

ಹೊಸಪೇಟೆ: ಸ್ಥಳೀಯ ಸಂಸ್ಥೆಗಳಿAದ ವಿಧಿಸುವ ಕರ ವಸುಲಾತಿ ವಿರೋಧಿಸಿ ಬೀದಿ ಬದಿ ವ್ಯಾಪಾರಿಗಗಳು ಮಂಗಳವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರಗೆ ಮನವಿ ಸಲ್ಲಿಸಿದರು.

ಸರ್ಕಾರವು ಬೀದಿ ಬದಿ ವ್ಯಾಪಾರಿಗಳ ನೆಮ್ಮದಿಯಾಗಿ ಬದುಕಲು ಕಟ್ಟಿಕೊಳ್ಳು ಜಾರಿಯಾಗಿರುವ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಡೇ ನಲ್ಮ್ ಯೋಜನೆ ಪ್ರೋತ್ಸಾಹ ಧನ ಬಡವರಿಗೆ ಪ್ರಯೋಜನವಾಗಿಲ್ಲ. ಸರ್ಕಾರದಿಂದ ಆದೇಶ ಮತ್ತು ಮೂಲ ಉದ್ದೇಶಗಳನ್ನು ಗಾಳಿಗೆ ತೂಲಾಗುತ್ತಿದೆ. ಕೇಂದ್ರ ಸರ್ಕಾರದ ಬೀದಿ ವ್ಯಾಪಾರಿಗಳ ನಿಯಂತ್ರಣ ಕಾಯ್ದೆ 2014, ಹಾಗೂ ರಾಜ್ಯ ಸರ್ಕಾರದ ಅಧಿನಿಯಮದ 2019 ರಂತೆ ಬೀದಿ ವ್ಯಾಪಾರಿಗಳ ಕಾಯ್ದೆ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಸ್ಪಷ್ಟವಾದ ನಿರ್ದೇಶನ ನೀಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಗ್ರಹಿಸಿದರು.

ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ, ಹರಪನಹಳ್ಳಿ, ಹೂವಿನಹಡಗಲಿ, ಕೊಟ್ಟೂರು, ಮರಿಯಮ್ಮನಹಳ್ಳಿ, ಕಮಲಾಪುರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳಿಂದ ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಉಲ್ಲಂಘಿಸಿ ಕರ ವಸೂಲಿ ಮಾಡಲಾಗುತ್ತಿದೆ. ಅಧಿಕಾರಿಗಳು ನಿಯಮಾನುಸಾರ ಕ್ರಮಕೈಗೊಳ್ಳಿಲಿ. ನಮಗೆ ಬದುಕಲು ಬಿಡಿ ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ನವೀನ್ ಕುಮಾರ, ಉಪಾಧ್ಯಕ್ಷರಾದ ರೋಷನ್, ಪ್ರಮುಖರಾದ ಮಂಜುನಾಥ, ಹುಲುಗಪ್ಪ ಬೆಳಗೋಡ, ಕೆ.ವೆಂಕಟೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net