ಹೊಸಪೇಟೆ: ಈ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ 02 ವರ್ಷಗಳ ತರಬೇತಿ ಭತ್ಯೆ ನೀಡಲು ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ.
ತಿತಿತಿ.sತಿ.ಞಚಿಡಿ.ಟಿiಛಿ.iಟಿ.ನಲ್ಲಿ ಅರ್ಜಿಸಲ್ಲಿಸಿ, ನಿಗಧಿತ ಅವಧಿಯೊಳಗೆ ಪೂರಕ ದಾಖಲೆಗಳೊಂದಿಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಇಲಾಖೆ ಡಿಡಿ ಕಚೇರಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.